ನಗರ ನಕ್ಸಲರು ರೈತರ ಹೆಸರಿನಲ್ಲಿ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ : ಶೋಭಾ ಕರಂದ್ಲಾಜೆ -Vishwanews24

Featured, ಉಡುಪಿ

ನಗರ ನಕ್ಸಲರು ರೈತರ ಹೆಸರಿನಲ್ಲಿ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ : ಶೋಭಾ ಕರಂದ್ಲಾಜೆ -Vishwanews24

ಉಡುಪಿ: ದೇಶ ವಿರೋಧಿ ಘೋಷಣೆ ಕೂಗುವವರು, ನಗರ ನಕ್ಸಲರು ರೈತರ ಹೆಸರಿನಲ್ಲಿ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು .

ಅವರು ಮಂಗಳವಾರ ಉಡುಪಿಯಲ್ಲಿ ಇತ್ತೀಚೆಗೆ ಜಾರಿಗೆ ಬಂದ ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆಯನ್ನು ಕೇಂದ್ರ ಸರ್ಕಾರ ನಿರ್ವಹಿಸಿದ ರೀತಿಯನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿರುವ ಕುರಿತು ಮಾಧ್ಯಮಗದವರ ಪ್ರಶ್ನೆಗೆ ಉತ್ತರಿಸಿ, ಕೃಷಿ ಮಸೂದೆ ಜಾರಿಗೆ ತರುವ ಮುಂಚಿತವಾಗಿ ಉನ್ನತ ಮಟ್ಟದ ಸಮಿತಿಯಲ್ಲಿ ಚರ್ಚಿಸಿ ಜಾರಿಗೊಳಿಸಲಾಗಿದೆ ಈ ಸಮಿತಿಯಲ್ಲಿ ಪಂಜಾಬ್ ನ ಈಗಿನ ಮುಖ್ಯಮಂತ್ರಿ, ಮಧ್ಯಪ್ರದೇಶದ ಆಗಿನ ಮುಖ್ಯಮಂತ್ರಿ ಕೂಡ ಇದ್ದರು ಆದರೆ ಈಗ ಅವರುಗಳ ರಾಜ್ಯದ ರೈತರೇ ಪ್ರತಿಭಟನೆ ನಡೆಸುತ್ತಿರುವುದು ನೋಡಿದರೆ ಇದರ ಹಿಂದೆ ರಾಜಕೀಯ ಹುನ್ನಾರ ಇರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ ಎಂದರು.

ಎನ್ಯುನಲ್ಲಿ ದೇಶ ವಿರೋಧಿ ಹೇಳಿಕೆ ನೀಡಿದ ಉಮರ್ ಖಲೀದ ಪ್ರತಿಭಟನೆಯಲ್ಲಿದ್ದಾರೆ. ರಾಷ್ಟ್ರದ್ರೋಹ ಕೆಲಸದಲ್ಲಿ ತೊಡಗುವ ಇವರಿಗೂ ಮತ್ತು ಶ್ರಮವಹಿಸಿ ದುಡಿಯುವ ರೈತರೊಂದಿಗೆ ಹೋಲಿಕೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಕೇಂದ್ರ ಸರಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯಿದೆಯಿಂದ ರೈತರಿಗೆ ಯಾವುದೇ ಸಮಸ್ಯೆಯಿಲ್ಲ ಇದನ್ನು ಕೇಂದ್ರ ಸರಕಾರ ಸುಪ್ರೀಂ ಕೋರ್ಟಿಗೆ ತಿಳಿಹೇಳುವ ಕೆಲಸ ಮಾಡಲಿದೆ ಎಂದರು.

ಕೋವಿಡ್ ಲಸಿಕೆ ವಿಚಾರದಲ್ಲಿ ನಡೆಯುತ್ತಿರುವ ರಾಜಕೀಯದ ಬಗ್ಗೆ ಪ್ರತಿಕ್ರಿಯಿಸಿದ ಅವರು ಲಸಿಕೆ ಒಂದು ಪ್ರಯೋಗ ದೇಶದ ಜನತೆಗೆ ಉಪಯೋಗವಾಗಬೇಕು ಎನ್ನುವ ನಿಟ್ಟಿನಲ್ಲಿ ಸರಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು ರಾಜಕೀಯ ಮಾಡುವವರ ಮಾಡಿಕೊಳ್ಳಲಿ ಎಂದರು.

ರಾಜ್ಯಾದ್ಯಂತ ನಡೆಯುತ್ತಿರುವ ಜನ ಸೇವಕ ಸಮಾವೇಶದಂಗವಾಗಿ ಇಂದು ಉಡುಪಿಯಲ್ಲಿ ಮಾನ್ಯ ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಕೆ ಎಸ್ ಈಶ್ವರಪ್ಪನವರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀ ಎನ್ ರವಿಕುಮಾರ್, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಶ್ರೀ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಶ್ರೀ ಮಟ್ಟಾರು ರತ್ನಾಕರ ಹೆಗ್ಡೆ, ಮಂಗಳೂರು ವಿಭಾಗ ಪ್ರಭಾರಿ ಶ್ರೀ ಉದಯ ಕುಮಾರ್ ಶೆಟ್ಟಿ, ರಾಜ್ಯ ಕಾರ್ಯಕಾರಣಿ ಸದಸ್ಯ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.