ನಟ ಸಂಚಾರಿ ವಿಜಯ್ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ -Vishwanews24
ನಟ ಸಂಚಾರಿ ವಿಜಯ್ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ -Vishwanews24
ಬೆಂಗಳೂರು: ಬೈಕ್ ಅಪಘಾತದಲ್ಲಿ ನಿಧನರಾದ ರಾಷ್ಟ್ರ ಪ್ರಶಸ್ತಿ ವಿಜೇತ ನಟ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕ ರಾಯಭಾರ ಕಚೇರಿ ಕನ್ನಡದಲ್ಲಿಯೇ ಟ್ವೀಟ್ ಮಾಡಿ ಸಂತಾಪ ಸೂಚಿಸಿದೆ.
ರಾಷ್ಟ್ರ ಪ್ರಶಸ್ತಿ ವಿಜೇತ #SanchariVijay ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ #Pride ತಿಂಗಳ ಆಚರಣೆಯ ಅಂಗವಾಗಿ LGBTQi+ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ “ನಾನು ಅವನಲ್ಲ…ಅವಳು” ಪ್ರದರ್ಶನ-ಸಂವಾದದಲ್ಲಿ ಭಾಗಿಯಾಗಿದ್ದ ಸಂಚಾರಿ ವಿಜಯ್. #RIP
— US Consulate Chennai (@USAndChennai) June 15, 2021
ಚೆನ್ನೈನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಅಧಿಕೃತ ಟ್ವಿಟರ್ ಖಾತೆ, ಯುಎಸ್ ಅಂಡ್ ಚೆನ್ನೈ ಖಾತೆಯಲ್ಲಿ ಈ ಟ್ವೀಟ್ ಮಾಡಲಾಗಿದೆ. ‘ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ #Pride ತಿಂಗಳ ಆಚರಣೆಯ ಅಂಗವಾಗಿ LGBTQi (ಲೈಂಗಿಕ ಅಲ್ಪಸಂಖ್ಯಾತರು) ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ ‘ನಾನು ಅವನಲ್ಲ…ಅವಳು’ ಪ್ರದರ್ಶನ ಸಂವಾದದಲ್ಲಿ ಸಂಚಾರಿ ವಿಜಯ್ ಭಾಗಿಯಾಗಿದ್ದರು’ ಎಂದು ಟ್ವೀಟ್ ಮಾಡಿದೆ.
ಇನ್ನು ಈ ಟ್ವೀಟ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ನೂರಾರು ಮಂದಿ ರಿಟ್ವೀಟ್ ಮಾಡಿದ್ದಾರೆ. ಕೆಲವರು ನಮ್ಮ ದೇಶದವರೇ.. ಹೀಗೆ ಸಾಮಾನ್ಯ ಜನರಿಗೆ ಅರ್ಥ ಆಗುವ ರೀತಿಯಲ್ಲಿ ಹಾಕಲ್ಲ. ಆದರೆ ನೀವು ಕನ್ನಡದ ನಟನಿಗೆ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿರುವುದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.
