ನಟಿ ಅನು ಪ್ರಭಾಕರ್‌ಗೆ ಕೊರೊನಾ ಪಾಸಿಟಿವ್ -Vishwanews24

Featured, ರಾಜ್ಯ ನ್ಯೂಸ್

ನಟಿ ಅನು ಪ್ರಭಾಕರ್‌ಗೆ ಕೊರೊನಾ ಪಾಸಿಟಿವ್ -Vishwanews24

ಬೆಂಗಳೂರು: ಚಂದನವನದ ನಟಿ ಅನು ಪ್ರಭಾಕರ್‌ಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಬಗ್ಗೆ ಅನು ಪ್ರಭಾಕರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ತುಂಬಾ ಸುರಕ್ಷಿತವಾಗಿ, ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಂಡರೂ ಕೊರೊನಾ ಸೋಂಕು ತಗುಲಿದೆ ಎಂದು ಅನು ಪ್ರಭಾಕರ್ ಮಾಹಿತಿ ಹಂಚಿಕೊಂಡಿದ್ದಾರೆ.

ಎಷ್ಟೇ ಸುರಕ್ಷಿತವಾಗಿ, ಮುನ್ನೆಚ್ಚರಿಕೆಯಿಂದ ಇದ್ದರೂ ಕೊರೊನಾ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನನ್ನ ಕುಟುಂಬದವರಿಗೆ ನೆಗೆಟಿವ್ ಬಂದಿದೆ. ನನ್ನ ಜೊತೆ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಕೊಳ್ಳಿ ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡಿದ್ದಾರೆ.

ನನಗೆ ಕೊರೊನಾ ಪಾಸಿಟಿವ್ ಬಂದಿದೆ. ಆದರೆ ನನ್ನ ವರದಿ ಇನ್ನೂ ಕೋವಿಡ್ ವಾರ್ ವೆಬ್‍ಸೈಟ್‍ನಲ್ಲಿ ಅಪ್ ಲೋಡ್ ಆಗಿಲ್ಲ. ಜೊತೆಗೆ ನನಗೆ ಬಿಯೂ ನಂಬರ್ ಕೂಡ ಬಂದಿಲ್ಲ. ಬಿಬಿಎಂಪಿ ಕಡೆಯಿಂದ ಯಾವುದೇ ಕರೆ ಬಂದಿಲ್ಲ. ನಿಮ್ಮ ಗಮನಕ್ಕೆ ತರುತ್ತಿದ್ದೇನೆ ಎಂದು ಟ್ವೀಟ್ ಮಾಡುವ ಮೂಲಕವಾಗಿ ಆರೋಗ್ಯ ಸಚಿವರಾದ ಸುಧಾಕರ್ ಅವರಿಗೆ ತಿಳಿಸಿದ್ದಾರೆ. ಅನುಪ್ರಭಾಕರ್ ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ,

ಶಿರೂರು ಮಠದ 31ನೇಯ ನೂತನ ಉತ್ತರಾಧಿಕಾರಿಯಾಗಿ ಅನಿರುದ್ದ ನೇಮಕ -Vishwanews24