ನನಗೆ ಯಾವುದೇ ಅಸಮಾಧಾನವಾಗಿಲ್ಲ , ದಯವಿಟ್ಟು ನನ್ನ ಪರವಾಗಿ ಪ್ರತಿಭಟನೆಗಳನ್ನು ಮಾಡಬೇಡಿ : ಶ್ರೀರಾಮುಲು ಮನವಿ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ತಮಗೆ ಡಿಸಿಎಂ ಸ್ಥಾನ ನೀಡಿಲ್ಲ ಎಂದು ರಾಜ್ಯದ ಹಲವೆಡೆ ಪಕ್ಷಕ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಪಕ್ಷದ ವಿರುದ್ಧ ನಡೆಯುತ್ತಿರುವ ಇಂತಹ ಯಾವುದೇ ಪ್ರತಿಭಟನೆಗಳನ್ನು ತಾವು ಖಂಡಿಸುವುದಾಗಿ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಶ್ರೀರಾಮುಲು, ನನಗೆ ಯಾವುದೇ ಅಸಮಾಧಾನವಾಗಿಲ್ಲ. ಹೀಗಾಗಿ ದಯವಿಟ್ಟು ನನ್ನ ಪರವಾಗಿ ಪ್ರತಿಭಟನೆಗಳನ್ನು ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಶ್ರೀರಾಮುಲು ‘ನನಗೆ ಅಸಮಾಧಾನವಾಗಿದೆ ಎಂದು ನಮ್ಮ ಪಕ್ಷದ ವಿರುದ್ಧ ನಡೆಯುತ್ತಿರುವ ಯಾವುದೇ ಪ್ರತಿಭಟನೆಯನ್ನು ನಾನು ಖಂಡಿಸುತ್ತೇನೆ. ಇದು ಸರಿಯಲ್ಲ, ದಯವಿಟ್ಟು ಯಾರೂ ಹೀಗೆ ಮಾಡಬಾರದು ಎಂದು ನಾನು ಮನವಿ ಮಾಡುತ್ತೇನೆ. ಬಿಜೆಪಿ ಕಾರ್ಯಕರ್ತರಿಗೆ ಪಕ್ಷ ಮೊದಲು… ಪಕ್ಷದ ಎಲ್ಲಾ ತೀರ್ಮಾನಗಳಿಗೆ ನಾನು ಯಾವಾಗಲೂ ಬದ್ಧನಾಗಿರುತ್ತೇನೆ’ ಅವರು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

 

ಬಳ್ಳಾರಿ, ಕೊಪ್ಪಳ ಹಾಗೂ ಚಿತ್ರದುರ್ಗದಲ್ಲಿ ಶ್ರೀರಾಮುಲು ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರು. ಬಳ್ಳಾರಿಯ ಹೊಸಪೇಟೆಯಲ್ಲಿ ಶ್ರೀ ರಾಮುಲು ಅಭಿಮಾನಿಗಳು ಇಂದು ಬೆಳಗ್ಗೆ ಪ್ರತಿಭಟನೆ ನಡೆಸಿದ್ದರು. ನಗರದ ರೋಟರಿ ವೃತ್ತದಲ್ಲಿ ಟೈಯರ್‍ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು.