ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ – vishwanews24
ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ
ಮುಂಬೈ: ನನ್ನ ಮಗಳು ತಪ್ಪು ಮಾಡಿದ್ರೆ ಕೇತನ್‌ನನ್ನು ತಳ್ಳಿ ಕೊಲೆಗೈದ ಅದೇ ಕೋಟೆಯಿಂದ ತಳ್ಳಿ ಬಿಡಿ ಎಂದು ಸಿಯಾ ಗೋಯಲ್ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.
ಕೇತನ್ ಕೊಲೆ ಆರೋಪಿಯಾದ ಸಿಯಾಳ ತಾಯಿ ಪೂಜಾ ಗೋಯಲ್ ಮಾಧ್ಯಮಗಳ ಜೊತೆ ಮಾತನಾಡಿ, ನನ್ನ ಮಗಳು ಸಿಯಾ, ಕೇತನ್ ಜೊತೆ ಮದುವೆ ಮಾತುಕತೆ ವೇಳೆ ಅಸಮಾಧಾನ ವ್ಯಕ್ತಪಡಿಸಿರಲಿಲ್ಲ. ಇಬ್ಬರೂ ನವೆಂಬರ್‌ನಲ್ಲಿ ರಾಜಸ್ಥಾನದ ಉದಯಪುರದ ಅರಮನೆಯಲ್ಲಿ ಮದುವೆಯಾಗಲು ಸಿದ್ಧರಾಗಿದ್ದರು. ಕೇತನ್ ಸಾವು ಕೇವಲ ಒಂದು ಕುಟುಂಬವನ್ನು ಮಾತ್ರವಲ್ಲ, ಎರಡು ಕುಟುಂಬಗಳಿಗೂ ತೀವ್ರ ದುಃಖ ಉಂಟು ಮಾಡಿದೆ.
ಇದನ್ನೂ ಓದಿ:
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24
ಕೇತನ್ ಕುಟುಂಬಕ್ಕಿಂತ ಹೆಚ್ಚು ನೋವನ್ನು ನಮ್ಮ ಕುಟುಂಬ ಅನುಭವಿಸುತ್ತಿದೆ. ಆರೋಪಿ ನನ್ನ ಮಗಳಾಗಿದ್ದರೂ ಸಹ, ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಮಗಳು ತಪ್ಪಿತಸ್ಥರೆಂದು ಸಾಬೀತಾದರೆ, ಕೇತನ್‌ನನ್ನು ತಳ್ಳಿದ ಸ್ಥಳದಿಂದಲೇ ಅವಳನ್ನು ತಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮಗಳ ಮೇಲಿನ ಆರೋಪ ಸಾಬೀತಾದರೆ ಆಕೆಗೆ ಯಾವುದೇ ಕರುಣೆ ತೋರಿಸಬೇಡಿ ಎಂದು ಸಿಯಾ ಪೋಷಕರು ಖಡಕ್ ಆಗಿ ಹೇಳಿದ್ದಾರೆ. ಒಂದು ವೇಳೆ ಆಕೆ ಅಪರಾಧಿಯಾಗಿದ್ದರೆ, ಆಕೆಗೆ ಕಾನೂನಿನಡಿಯಲ್ಲಿ ಅತ್ಯಂತ ಕಠಿಣ ಶಿಕ್ಷೆಯಾಗಬೇಕು. ಆಕೆ ತಪ್ಪಿತಸ್ಥೆ ಎಂದು ಸಾಬೀತಾದರೆ ಆಕೆಯನ್ನು ನೇಣುಗಂಬಕ್ಕೆ ಏರಿಸಿ, ಒಬ್ಬ ಹೆತ್ತ ತಾಯಿಯಾಗಿ ನಾನೇ ಈ ಮಾತನ್ನು ಹೇಳುತ್ತಿದ್ದೇನೆ ಎಂದು ತಾಯಿ ಪೂಜಾ ಗೋಯಲ್ ಭಾವುಕರಾಗಿ ನುಡಿದಿದ್ದಾರೆ. ಇತ್ತ ಸಿಯಾ ತಂದೆ ಪ್ರವೀಣ್ ಗೋಯಲ್ ಕೂಡ ಇದೇ ರೀತಿಯ ಕಠಿಣ ನಿಲುವು ವ್ಯಕ್ತಪಡಿಸಿದ್ದು, ಈ ಭೀಕರ ಪ್ರಕರಣದಲ್ಲಿ ಯಾರು ತಪ್ಪಿತಸ್ಥರೋ, ಅವರು ಕಠಿಣ ಶಿಕ್ಷೆ ಅನುಭವಿಸಲೇಬೇಕು. ಪೊಲೀಸರ ತನಿಖೆಯಲ್ಲಿ ಒಂದು ವೇಳೆ ನನ್ನ ಮಗಳೇ ಅಪರಾಧಿ ಎಂದು ಸಾಬೀತಾದರೂ ಸರಿ, ಆಕೆಗೂ ಗಲ್ಲು ಶಿಕ್ಷೆಯೇ ಆಗಬೇಕು ಎಂದು ಹೇಳಿದ್ದಾರೆ.
