ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡುವುದು ಜನರೇ ಹೊರತು, ಬೇರೆ ಯಾರೂ ಅಲ್ಲ : ಡಿ.ಕೆ. ಶಿ – vishwanews24
ಜನರೇ ನನ್ನ ಹಿಂದಿರುವ ಶಕ್ತಿ, ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋದು ಅವರಿಗೆ ಬಿಟ್ಟಿದ್ದು: ಡಿ.ಕೆ. ಶಿ
ಬೆಂಗಳೂರು: ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡುವುದು ಜನರೇ ಹೊರತು, ಬೇರೆ ಯಾರೂ ಅಲ್ಲ. ಅವರೇ ನನ್ನ ಹಿಂದಿರುವ ಶಕ್ತಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದ ಆವರಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ, ಚನ್ನಪಟ್ಟಣದಿಂದ ಸ್ಪರ್ಧೆ ಮಾಡಿದರೆ ಶಿವಕುಮಾರ್ ಅವರ ರಾಜಕೀಯ ಭವಿಷ್ಯ ಅಂತ್ಯವಾಗಲಿದೆ ಎಂಬ ಸಿ.ಪಿ ಯೋಗೇಶ್ವರ್ (C.P Yogeshwar) ಹೇಳಿಕೆಗೆ ಅವರು ತಿರುಗೇಟು ಕೊಟ್ಟಿದ್ದಾರೆ. ನಮ್ಮ ರಾಜಕೀಯ ಅಂತ್ಯ ತೀರ್ಮಾನ ಮಾಡುವವರು ಜನರು. ಯೋಗೇಶ್ವರ್ ದೊಡ್ಡವರು, ಅವರ ಮಾತಿಗೆ ಪ್ರತಿಕ್ರಿಯೆ ನೀಡುವಷ್ಟು ಸಮಯ ನನ್ನ ಬಳಿ ಇಲ್ಲ ಎಂದು ಅವರು ಹೇಳಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಕೇಸ್: ದರ್ಶನ್ ಸೇರಿ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಇಂದು ಅಂತ್ಯ – vishwanews24
ನಾನೂ ಸಹ ರಾಮನಗರ ಜಿಲ್ಲೆಯವನು. ನಿಮ್ಮ ಋಣ ತೀರಿಸಲು ಬದ್ಧನಿದ್ದೇನೆ, ಶಕ್ತಿ ಕೊಡಿ ಎಂದು ಆ ಕ್ಷೇತ್ರದ ಜನರ ಬಳಿ ಕೇಳಿಕೊಂಡಿದ್ದೇನೆ. ನನ್ನ ಮೇಲೆ ವಿಶ್ವಾಸವಿದ್ದರೆ ಬೆಂಬಲ ನೀಡುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸ್ವಪ್ರತಿಷ್ಠೆಗಾಗಿ ದೇಶದ ಸಂಪತ್ತು ಹಾಳು ಮಾಡುತ್ತಿದ್ದಾರೆ ಎಂಬ ಸುರೇಶ್ ಕುಮಾರ್ ಅವರ ಹೇಳಿಕೆ ವಿಚಾರವಾಗಿ, ಚನ್ನಪಟ್ಟಣದಲ್ಲಿ ಉಪಚುನಾವಣೆ ನಡೆದರೆ ಕನಕಪುರದಲ್ಲಿ ಯಾಕೆ ಉಪಚುನಾವಣೆ ನಡೆಯುತ್ತದೆ? ನಾನು ಕನಕಪುರದ ಶಾಸಕ. ಪಕ್ಷದ ಅಧ್ಯಕ್ಷನಾಗಿ ನನ್ನ ಮೇಲೆ ಜವಾಬ್ದಾರಿ ಇದೆ. ಇದೂ ನನ್ನದೇ ಕ್ಷೇತ್ರ, ನನ್ನದೇ ನಾಯಕತ್ವ. ಸಿದ್ದರಾಮಯ್ಯ ಹಾಗೂ ನಾನು ಸೇರಿ ಚುನಾವಣೆ ನಡೆಸುತ್ತೇವೆ ಎಂದಿದ್ದಾರೆ.
