ನನ್ನ ಹೇಳಿಕೆಯಿಂದ ನೇಹಾ ಹೆತ್ತವರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ : ಪರಮೇಶ್ವರ್ – Vishwanews24
ನನ್ನ ಹೇಳಿಕೆಯಿಂದ ನೇಹಾ ಹೆತ್ತವರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ : ಪರಮೇಶ್ವರ್
ಬೆಂಗಳೂರು: ನನ್ನ ಹೇಳಿಕೆಯಿಂದ ನೇಹಾ ಹೆತ್ತವರಿಗೆ ನೋವಾಗಿದ್ದರೆ ವಿಷಾದವಿರಲಿ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಹುಬ್ಬಳ್ಳಿಯ ಕಾಲೇಜೊಂದರ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಯಕ್ತಿಕ ಕಾರಣಗಳಿಗೆ ಆಗಿರುವ ಕೊಲೆ ಎಂಬ ಅವರು ಹೇಳಿಕೆ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನನ್ನ ಮಾತುಗಳಿಂದ ನೇಹಾ ತಂದೆತಾಯಿಗಳಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ಪ್ರಕರಣವನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನಾನಾಗಲೀ, ಸಿಎಂ ಮತ್ತು ಡಿಸಿಎಂ ಜವಾಬ್ದಾರಿಯುತ ಸ್ಥಾನಗಳಲ್ಲಿ ಇರುವವರು. ನಾವು ಹಗುರವಾದ ಹೇಳಿಕೆಗಳನ್ನು ನೀಡಲಾಗುವುದಿಲ್ಲ ಎಂದು ತಿಳಿಸಿದರು.
ಪ್ರಧಾನಿ ರಾಜ್ಯಕ್ಕೆ ಖಾಲಿ ಚೊಂಬು ಕೊಟ್ಟಿದ್ದಾರೆ : ಸಿಎಂ ಆರೋಪ -Vishwanews24
ಇನ್ನು ಸತ್ಯವನ್ನು ಎಂದಿಗೂ ಮುಚ್ಚಿಡಲು ಸಾಧ್ಯವಿಲ್ಲ. ನಮಗೆ ಜವಬ್ದಾರಿ ಇದೆ. ನನಗಿದ್ದ ಮಾಹಿತಿ ಆಧರಿಸಿ ಹೇಳಿಕೆ ನೀಡಿದ್ದು. ತನಿಖೆ ನಡೆಯುತ್ತಿದ್ದು, ಅದು ಪೂರ್ತಿಯಾದ ಬಳಿಕ ಸತ್ಯಾಸತ್ಯತೆ ಹೊರಬೀಳಲಿದೆ ಎಂದರು.
