ನಮಗೆ ಮಲ್ಲಿಕಾರ್ಜುನ ಖರ್ಗೆಯವರೇ ಹೈಕಮಾಂಡ್, ಅಭ್ಯರ್ಥಿಗಳನ್ನು ಘೋಷಿಸುವ ಹಕ್ಕು ಸಿದ್ದರಾಮಯ್ಯಗೆ ಇಲ್ಲ: ಡಿಕೆ ಶಿವಕುಮಾರ್ – Vishwanews24
ನಮಗೆ ಮಲ್ಲಿಕಾರ್ಜುನ ಖರ್ಗೆಯವರೇ ಹೈಕಮಾಂಡ್, ಅಭ್ಯರ್ಥಿಗಳನ್ನು ಘೋಷಿಸುವ ಹಕ್ಕು ಸಿದ್ದರಾಮಯ್ಯಗೆ ಇಲ್ಲ: ಡಿಕೆ ಶಿವಕುಮಾರ್
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಯಾರು ಕಾಂಗ್ರೆಸ್ ಅಭ್ಯರ್ಥಿಗಳಾಗಿ ನಿಲ್ಲಬೇಕು ಎಂದು ಎಐಸಿಸಿ ನಿರ್ಧರಿಸುತ್ತದೆ. ಅಭ್ಯರ್ಥಿಗಳನ್ನು ಘೋಷಿಸುವ ಹಕ್ಕು ಸಿದ್ದರಾಮಯ್ಯ ಅವರಿಗಾಗಲೀ, ನನಗಾಗಲೀ ಇಲ್ಲ. ಸಿದ್ದರಾಮಯ್ಯ ಏಕೆ ಹಾಗೆ ಹೇಳಿದ್ದಾರೋ ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಸೋತವರಿಗೆ ಪ್ರೋತ್ಸಾಹ ನೀಡಲೆಂದು ಸಿದ್ದರಾಮಯ್ಯ ಹಾಗೆ ಹೇಳಿರಬಹುದು. ನಮಗೆ ಮಲ್ಲಿಕಾರ್ಜುನ ಖರ್ಗೆಯವರೇ ಹೈಕಮಾಂಡ್. ಕರ್ನಾಟಕದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸುವ ಹಕ್ಕು ಖರ್ಗೆ ಅವರಿಗೆ ಮಾತ್ರವೇ ಇದೆ ಎಂದು ಅವರು ತಿಳಿಸಿದರು.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೊಪ್ಪಳ ಜಿಲ್ಲೆಯಲ್ಲಿ ಕಾಂಗ್ರೆಸ್ ಉಮೇದುವಾರರನ್ನು ಸಿದ್ದರಾಮಯ್ಯ ಘೋಷಿಸಿರುವ ಸಂದರ್ಭದ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಕಾಂಗ್ರೆಸ್ ಟಿಕೆಟ್ಗೆ ಅರ್ಜಿ ಹಾಕಲು ಇಂದು ಕೊನೆಯ ದಿನ. ಬಹುಶಃ ಹಿರಿಯರಿಗೆ ಪ್ರೋತ್ಸಾಹ ನೀಡಲು ಅವರು ಹೀಗೆ ಮಾತನಾಡಿರಬಹುದು. ಆದರೆ ಅಭ್ಯರ್ಥಿಗಳನ್ನು ಘೋಷಿಸುವ ಅಧಿಕಾರವು ಹೈಕಮಾಂಡ್ಗೆ ಮಾತ್ರವೇ ಇದೆ. ಹೈಕಮಾಂಡ್ ಎಂದರೆ ಖರ್ಗೆ ಎಂದು ಹೇಳಿದರು.
📛 ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದ ಕಾರು ; ಓರ್ವ ಸಾವು – Vishwanews24
