ನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲಿ ಆಗುತ್ತಿಲ್ಲ ಅಂತ ನಾನೇ ಒಪ್ಪಿಕೊಳ್ಳುತ್ತಿದ್ದೇನೆ. : ಕೆ.ಎಸ್.ಈಶ್ವರಪ್ಪ – Vishwanews24
ನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲಿ ಆಗುತ್ತಿಲ್ಲ ಅಂತ ನಾನೇ ಒಪ್ಪಿಕೊಳ್ಳುತ್ತಿದ್ದೇನೆ. : ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ: ನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲಿಯೇ ಮಾಡಲು ಆಗುತ್ತಿಲ್ಲ ಎಂಬುವುದನ್ನು ನಾನು ಒಪ್ಪಿಕೊಳ್ಳುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಹತ್ಯೆ ವಿಚಾರವಾಗಿ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ತಪ್ಪಿಲ್ಲದ ಹಿಂದುತ್ವವಾದಿಗಳನ್ನು ಕೆಲವು ಮುಸಲ್ಮಾನ್ ಗೂಂಡಾಗಳು ಕಗ್ಗೋಲೆ ಮಾಡುವುದು, ಹಲ್ಲೆ ಮಾಡುವುದು ನಡೆಯುತ್ತಿದೆ. ಇದನ್ನು ನಾನು ಉಗ್ರವಾಗಿ ಖಂಡನೆ ಮಾಡುತ್ತೇನೆ. ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆಯನ್ನು ಎಲ್ಲಾ ರಾಜಕೀಯ ಪಕ್ಷಗಳು ಖಂಡನೆ ಮಾಡಬೇಕು. ಯಾರೂ ಇವರಿಗೆ ಬೆಂಬಲ ಕೊಡಬಾರದು. ಕೊಲೆಗಡುಕರನ್ನು ಬಂಧಿಸುತ್ತೇವೆ ಎಂದು ಸಿಎಂ ಹೇಳಿದ್ದಾರೆ. ಸರ್ಕಾರ ಬಲಹೀನ, ದೌರ್ಬಲ್ಯ ಅಲ್ಲ. ಇದೇ ರೀತಿ ಮುಂದುವರಿದರೆ ರಾಜ್ಯದಲ್ಲಿ ಶಾಂತಿ ಕಾಪಾಡಲು ಹಿಂದೂಗಳು ಸಂಯಮದಿಂದ ನಡೆದುಕೊಂಡು ಹೋಗುತ್ತಿದ್ದಾರೆ. ಎಷ್ಟು ದಿನದಿಂದ ಶಾಂತಿಯಿಂದ ಇರಲು ಸಾಧ್ಯ. ಸಿಎಂ ಜೊತೆ ಮಾತನಾಡುತ್ತೇನೆ. ಕೊಲೆಗಟುಕರ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಅಂತಾ ಮನವಿ ಮಾಡುತ್ತೇನೆ ಎಂದಿದ್ದಾರೆ.
ಹಿಂದೂಗಳು ಶಾಂತಿ ಪ್ರಿಯರು ಅದನ್ನು ಪರೀಕ್ಷೆ ಮಾಡಲು ಹೋಗಬೇಡಿ. ಕೊಲೆಗೆ ಕೊಲೆ ಎಂಬುದು ನಮ್ಮ ಉದ್ದೇಶ ಅಲ್ಲ. ಆ ರೀತಿಯಾದರೆ ರಾಜ್ಯದಲ್ಲಿ ರಕ್ತಪಾತವೇ ಆಗುತ್ತದೆ. ಅವರ ಮನಸ್ಥಿತಿ ಬದಲಾವಣೆ ಮಾಡಿಕೊಳ್ಳದಿದ್ದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಿಂದೂಗಳ ಕೊಲೆಯಾದಾಗ ಹಿಂದೂಗಳನ್ನೇ ಜೈಲಿಗೆ ಕಳುಹಿಸುತ್ತಿದ್ದರು. ನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲಿ ಆಗುತ್ತಿಲ್ಲ ಅಂತ ನಾನೇ ಒಪ್ಪಿಕೊಳ್ಳುತ್ತಿದ್ದೇನೆ. ನಮ್ಮ ಕಾರ್ಯಕರ್ತರನ್ನು ಹುಡುಕಿ, ಹುಡುಕಿ ಕೊಲೆ ಮಾಡುತ್ತಿದ್ದಾರೆ. ಆದರೆ ರಾಜೀನಾಮೆ ಅದಕ್ಕೆ ಪರಿಹಾರವಲ್ಲ. ಕೊಲೆಗಡುಕರಿಗೆ ಕೊಡುತ್ತಿರುವ ಶಿಕ್ಷೆ ಸಾಕಾಗುತ್ತಿಲ್ಲ. ಕಠಿಣ ಶಿಕ್ಷೆ ಕೊಡುವ ಬಗ್ಗೆ ಕ್ರಮ ವಹಿಸಬೇಕಿದೆ. ಹಿಂದುತ್ವ ಸಿದ್ದಾಂತವನ್ನು ದುರ್ಬಲ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಹಿಂದುತ್ವವಾದಿಗಳು ಎದುರುವ ಪ್ರಶ್ನೆಯೇ ಇಲ್ಲ ಎಂದು ಹರಿಹಾಯ್ದಿದ್ದಾರೆ.
