ನಮ್ಮ ತಪ್ಪಿನಿಂದ ಪಂಜಾಬ್ ನಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ : ಸಿದ್ದರಾಮಯ್ಯ – Vishwanews24

Featured, ರಾಜ್ಯ ನ್ಯೂಸ್

ಪಂಜಾಬ್ನಲ್ಲಿ ಬಿಜೆಪಿ ಬಂದಿಲ್ಲ ಬದಲಾಗಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಿದೆ..

ಬಿಜೆಪಿ ಅಧಿಕಾರ ಇರುವ ರಾಜ್ಯಗಳಲ್ಲಿ ಗೆದ್ದಿದ್ದಾರೆ ಅಷ್ಟೆ..

ಬೆಂಗಳೂರು: ನಮ್ಮ ತಪ್ಪಿನಿಂದ ಪಂಜಾಬ್ನಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಇನ್ನೂ ಪೂರ್ಣಾವಾಗಿ ಫಲಿತಾಂಶ ಬಂದಿಲ್ಲ.‌ ಪಂಜಾಬ್ನಲ್ಲಿ ಮಾತ್ರ ನಾವು ಅಧಿಕಾರದಲ್ಲಿದ್ದೆವು. ಬೇರೆ ರಾಜ್ಯಗಳಲ್ಲಿ ನಾವು ಅಧಿಕಾರದಲ್ಲಿರಲಿಲ್ಲ .ಉತ್ತರಖಂಡ, ಗೋವಾದಲ್ಲಿ ನಿರೀಕ್ಷೆ ಇತ್ತು. ನಮ್ಮ ತಪ್ಪಿನಿಂದ ಪಂಜಾಬ್ ನಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ. ಪಂಜಾಬ್ನಲ್ಲಿ ಬಿಜೆಪಿ ಬಂದಿಲ್ಲ ಬದಲಾಗಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಿದೆ. ಈ ಚುನಾವಣೆಗಳಿಂದ ನಾನೇನು ಬಹಳ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ಆದರೆ ಗೋವಾ, ಉತ್ತರಾ ಖಂಡದಲ್ಲಿ ಅಧಿಕಾರಕ್ಕೆ ಬರಬಹುದೆಂಬ ಅಂದಾಜು ಇತ್ತು ಎಂದರು.

ಈ ಚುನಾವಣೆಯಿಂದ ಧೈರ್ಯ ಕಳೆದುವಂಥದ್ದು ಏನಿಲ್ಲ ಎಂದ ಸಿದ್ದರಾಮಯ್ಯ, ಪಂಜಾಬ್ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದಾರಾ..? ಅಧಿಕಾರ ಇರುವ ರಾಜ್ಯಗಳಲ್ಲಿ ಗೆದ್ದಿದ್ದಾರೆ ಅಷ್ಟೆ. ಇದರಿಂದ ಬಹಳ ಜಂಬ ಪಡೆದುಕೊಳ್ಳಬೇಕಾಗಿಲ್ಲ ಎಂದು ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಸಿದ್ದರಾಮಯ್ಯ ಬಿಜೆಪಿಗೆ ತಿರುಗೇಟು ನೀಡಿದರು.

ಪಂಚರಾಜ್ಯ ವಿಧಾನಸಭಾ ಚುನಾವಣೆ : ಮತ ಎಣಿಕೆಯಲ್ಲಿ ಗೋಲ್‍ಮಾಲ್  ; ಓಟಿಂಗ್ ಮೆಷಿನ್- ಇವಿಎಂ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ – Vishwanews24

Leave a Reply