ನಮ್ಮ ಧರ್ಮದ ಬಗ್ಗೆ ನಾವೇ ತೀರ್ಮಾನಿಸುತ್ತೇವೆ : ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿಗೆ ಓವೈಸಿ ಆಕ್ರೋಶ – vishwanews24

Featured, ರಾಷ್ಟ್ರ ನ್ಯೂಸ್

ಅಲಹಾಬಾದ್ ಹೈಕೋರ್ಟ್ ತೀರ್ಪು ಇಸ್ಲಾಂ ಧರ್ಮದ ಮೇಲಿನ ದಾಳಿ

ನಮ್ಮ ಧರ್ಮ, ನಾವೇ ನಿರ್ಧರಿಸುತ್ತೇವೆ : ಓವೈಸಿ ಆಕ್ರೋಶ

ಹೈದರಾಬಾದ್: ಶಾಲೆಯಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಮುಸ್ಲಿಂ ವಿದ್ಯಾರ್ಥಿನಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್‌ನ ತೀರ್ಪನ್ನು ಎಐಎಂಐಎಂ  ಮುಖ್ಯಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ತೀವ್ರವಾಗಿ ಖಂಡಿಸಿದ್ದಾರೆ.

ಈ ತೀರ್ಪನ್ನು “ಇಸ್ಲಾಂ ಮೇಲಿನ ದಾಳಿ” ಎಂದು ಕರೆದಿರುವ ಅವರು, ಇಸ್ಲಾಂ ಧರ್ಮದಲ್ಲಿ ಯಾವುದು ಅತ್ಯಗತ್ಯ, ಯಾವುದು ಅಲ್ಲ ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ಯಾರು ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: 

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ : ಆದಿ ಸುಬ್ರಹ್ಮಣ್ಯ ಕ್ಷೇತ್ರದ ಮೆಟ್ಟಿಲಿನವರೆಗೂ ನೀರು – vishwanews24

“ಇದು ನಮ್ಮ ಧರ್ಮ, ಇದರಲ್ಲಿ ಯಾವುದು ಅತ್ಯಗತ್ಯ ಎಂಬುದನ್ನು ನಾವೇ ತೀರ್ಮಾನಿಸುತ್ತೇವೆ. ಅದನ್ನು ನಿರ್ಧರಿಸಲು ನ್ಯಾಯಾಧೀಶರು ಯಾರು? ಇದು ನಮ್ಮ ಧರ್ಮದ ಮೇಲಿನ ನೇರ ದಾಳಿ” ಎಂದು ಓವೈಸಿ ಆಕ್ರೋಶ ಹೊರಹಾಕಿದ್ದಾರೆ.ಧಾರ್ಮಿಕ ಅತ್ಯಗತ್ಯ ಆಚರಣೆಗಳಿಗೆ ಸಂಬಂಧಿಸಿದ ವಿಷಯವನ್ನು ಶಬರಿಮಲೆ ಪ್ರಕರಣದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ಪರಿಶೀಲಿಸುತ್ತಿರುವಾಗ, ಅಲಹಾಬಾದ್ ಹೈಕೋರ್ಟ್ ಈ ಕುರಿತು ತೀರ್ಪು ನೀಡಬಾರದಿತ್ತು ಎಂದು ಓವೈಸಿ ಹೇಳಿದರು.

ಈ ಆದೇಶವು ಸಂವಿಧಾನದ 19ನೇ ವಿಧಿ (ಅಭಿವ್ಯಕ್ತಿ ಸ್ವಾತಂತ್ರ್ಯ) ಮತ್ತು 25ನೇ ವಿಧಿ (ಧಾರ್ಮಿಕ ಸ್ವಾತಂತ್ರ್ಯ)ಗಳಿಗೆ ವಿರುದ್ಧವಾಗಿದೆ. ಆಕೆ ಹಿಜಾಬ್ ಧರಿಸುತ್ತಿರುವುದು ತಲೆಯ ಮೇಲೆಯೇ ಹೊರತು ಮನಸ್ಸಿನ ಮೇಲಲ್ಲ. ಈ ತೀರ್ಪಿನಿಂದ ಮುಸ್ಲಿಂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹಿನ್ನಡೆಯಾಗಲಿದೆ. ಉತ್ತರ ಪ್ರದೇಶದಲ್ಲಿ ಈಗಾಗಲೇ ಪ್ರೌಢಶಾಲೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳ ದಾಖಲಾತಿ ಪ್ರಮಾಣ ಅತ್ಯಂತ ಕಡಿಮೆಯಿದ್ದು, ಅವರ ಶಿಕ್ಷಣವನ್ನು ತಡೆಯುವ ಪ್ರಯತ್ನ ಇದಾಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: 

ಮಂಗಳೂರು: ಸಾಂಬಾರ್‌ನಲ್ಲಿ ಜಿರಳೆ ; ತೊಕ್ಕೊಟ್ಟುವಿನ ಹೋಟೆಲ್ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ – vishwanews24

ಶಿಸ್ತು ಮತ್ತು ಸಮಾನತೆಯನ್ನು ಕಾಯ್ದುಕೊಳ್ಳಲು ಸಮವಸ್ತ್ರ ನಿಯಮ ಜಾರಿಗೊಳಿಸುವ ಸಂಪೂರ್ಣ ಸ್ವಾಯತ್ತತೆ ಶಿಕ್ಷಣ ಸಂಸ್ಥೆಗಳಿಗೆ ಇದೆ ಎಂಬ ನ್ಯಾಯಾಲಯದ ಅಭಿಪ್ರಾಯವನ್ನು ತಿರಸ್ಕರಿಸಿದ ಓವೈಸಿ, ಏಕರೂಪತೆಯೇ ಸಮಾನತೆಯಲ್ಲಎಂದು ಪ್ರತಿಪಾದಿಸಿದರು.

Leave a Reply