ನಮ್ಮ ಪಕ್ಷವನ್ನು ರಾಜಕೀಯವಾಗಿ ಎದುರಿಸಲಾಗದೆ ಮೋದಿ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ನಮ್ಮನ್ನು ದಮನಿಸಲು ಹೊರಟಿದೆ : ಸಿದ್ದರಾಮಯ್ಯ ಕಿಡಿ -Vishwanews24
ಬೆಂಗಳೂರು : ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ದಾಳಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ಐಟಿ ಇಲಾಖೆ ನಡೆಸುತ್ತಿರುವ ದಾಳಿಗಳ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಕಿಡಿಕಾರಿದ್ದಾರೆ.
ಡಾ.ಜಿ.ಪರಮೇಶ್ವರ್ ಮನೆ, ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆ ದಾಳಿ ಮಾಡಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ಐಟಿ ಇಲಾಖೆ ನಡೆಸುತ್ತಿರುವ ದಾಳಿಗಳ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ಐಟಿ ಇಲಾಖೆ ನಡೆಸುತ್ತಿರುವ ದಾಳಿಗಳ ಹಿಂದೆ ರಾಜಕೀಯ ದುರುದ್ದೇಶ ಇದೆ.
ನಮ್ಮ ಪಕ್ಷವನ್ನು ರಾಜಕೀಯವಾಗಿ ಎದುರಿಸಲಾಗದೆ @narendramodi ಸರ್ಕಾರ ಈ ರೀತಿ ಅಧಿಕಾರ ದುರ್ಬಳಕೆ ಮಾಡಿಕೊಂಡು ನಮ್ಮನ್ನು ದಮನಿಸಲು ಹೊರಟಿದೆ. ಇದಕ್ಕೆ ನಾವು
ಜಗ್ಗುವುದಿಲ್ಲ,
ಬಗ್ಗುವುದಿಲ್ಲ.— Siddaramaiah (@siddaramaiah) October 10, 2019
