ನಾನು ನನ್ನ ಹುಟ್ಟುಹಬ್ಬ ಆಚರಣೆ ಮಾಡಲ್ಲ : ಸಿಎಂ ಬೊಮ್ಮಾಯಿ – Vishwanews24

Featured, ರಾಜ್ಯ ನ್ಯೂಸ್

ಜ. 28ಕ್ಕೆ ಸಿಎಂ ಬೊಮ್ಮಾಯಿ ಅವರ ಹುಟ್ಟಿದ ದಿನ ಹಾಗೂ ಬೊಮ್ಮಾಯಿ ಸರ್ಕಾರಕ್ಕೆ ಆರು ತಿಂಗಳು ..

ಸರ್ಕಾರದ ಆರು ತಿಂಗಳ ಸಾಧನೆಗಳ ಬಗ್ಗೆ ಪುಸ್ತಕ ಬಿಡುಗಡೆ..

ಬೆಂಗಳೂರು: ಶುಕ್ರವಾರ ಸಿಎಂ ಬಸವರಾಜ ಬೊಮ್ಮಾಯಿ ಅವರ ಹುಟ್ಟಿದ ದಿನ. ಆದರೆ ನಾನು ನನ್ನ ಹುಟ್ಟುಹಬ್ಬವನ್ನು ಆಚರಣೆ ಮಾಡಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ನಾನು ಹುಟ್ಟುಹಬ್ಬ ಆಚರಣೆ ಮಾಡಲ್ಲ, ಯಾವತ್ತೂ ಮಾಡಿಲ್ಲ ಎಂದರು.

ಇದೇ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಜನವರಿ 28ಕ್ಕೆ ಆರು ತಿಂಗಳು ಆಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಆರು ತಿಂಗಳ ಸಾಧನೆಗಳ ಬಗ್ಗೆ ಪುಸ್ತಕ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಸರ್ಕಾರಕ್ಕೆ ಆರು ತಿಂಗಳು ಆಗಿರುವ ಬಗ್ಗೆ ಪುಸ್ತಕ ಬಿಡುಗಡೆ ಮಾಡುತ್ತೇನೆ. ಜನ ಉಪಯೋಗಿ ಆಗಿದ್ದೇವೆ ಎಂಬ ನಿಟ್ಟಿನಲ್ಲಿ ಸರ್ಕಾರದ ಕಾರ್ಯಕ್ರಮದ ಪಕ್ಷಿನೋಟ ಈ ಪುಸ್ತಕದಲ್ಲಿ ಇರಲಿದೆ. ನಮ್ಮ ಸರ್ಕಾರ ಸ್ಪಂದನಾ ಶೀಲವಾಗಿದೆ. ಸಮಸ್ಯೆಗಳಿಗೆ ಸ್ಪಂದನೆ ಮಾಡಿಕೊಂಡು ಬಂದಿದ್ದೇವೆ. ಅದಕ್ಕೆ ಯಾವುದೇ ಸಂದರ್ಭ ಬೇಕಾಗಿಲ್ಲ ಎಂದರು.

ಇದನ್ನೂ ಓದಿ :

ಮೈಸೂರು : ಆರ್ಥಿಕ ಸಂಕಷ್ಟ ; ಊಟದಲ್ಲಿ ವಿಷ ಬೆರೆಸಿಕೊಂಡು ಸೇವಿಸಿ ದಂಪತಿ ಆತ್ಮಹತ್ಯೆಗೆ ಶರಣು – Vishwanews24

Leave a Reply