ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರಲು ಇಷ್ಟಪಡುತ್ತೇನೆ : ಡಿಕೆ ಶಿ – vishwanews24

Featured, ರಾಜ್ಯ ನ್ಯೂಸ್

ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರಲು ಇಷ್ಟಪಡುತ್ತೇನೆ : ಡಿಕೆ ಶಿ

ನವದೆಹಲಿ: ಪವರ್ ಶೇರಿಂಗ್ ವಿಚಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರುತ್ತೇನೆ ಹೇಳಿದ್ದಾರೆ.

ನಾನು ಹೈಕಮಾಂಡ್‌ನವರಿಗೆ ತೊಂದರೆ ಕೊಡಲು ಹೋಗುವುದಿಲ್ಲ ಎಂದಿದ್ದಾರೆ.

ಬ್ರಹ್ಮಾವರ: ಹೂಡಿಕೆ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ – vishwanews24

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ರಾಹುಲ್‌ಗಾಂಧಿ  ಅವರಿಗೆ ತೊಂದರೆ ಕೊಡಲು ಬಯಸುವುದಿಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ನಾನು ಯಾರನ್ನು ಭೇಟಿ ಮಾಡಿಲ್ಲ. ವಿದೇಶದಿಂದ ರಾಹುಲ್‌ ಗಾಂಧಿ ನಿನ್ನೆ ಆಗಮಿಸಿದ್ದು ಅವರಿಗೆ ಈಗ ತೊಂದರೆ ನೀಡಲು ಹೋಗುವುದಿಲ್ಲ. ನಾನು ಪಕ್ಷದ ಕಾರ್ಯಕರ್ತನ್ನಾಗಿ ಇರಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಡಿ.26 ರಿಂದ 28ರ ವರೆಗೆ  “ಕಾಪು ಕಡಲ ಪರ್ಬ” : ಆಮಂತ್ರಣ ಪತ್ರಿಕೆ ಬಿಡುಗಡೆ – vishwanews24

ಸಿಎಂ ಬದಲಾವಣೆ ಬಗ್ಗೆ ಯಾವುದೇ ಊಹಾಪೋಹಗಳಿಲ್ಲ. ಬ್ರೇಕ್ ಫಾಸ್ಟ್ ಮೀಟಿಂಗ್ ಬಹಳ ಸಾಮಾನ್ಯ ಪ್ರಕ್ರಿಯೆಯಾಗಿದ್ದು ಎಲ್ಲರ ಜೊತೆಗೂ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡುತ್ತೇವೆ. ಶೇರಿಂಗ್ ಕೇರಿಂಗ್ ಬಹಳ ಸಾಮಾನ್ಯ ಎಂದು ತಿಳಿಸಿದರು.
ಮೈಸೂರಿನಲ್ಲಿ ಅಹಿಂದ ಸಮಾವೇಶ ನಡೆಸುವ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರಿಗೆ ಒಳ್ಳೆದಾಗಲಿ ಎಂದಷ್ಟೇ ಉತ್ತರ ನೀಡಿದರು.

Leave a Reply