ನಾನು ಸ್ಪರ್ಧಿಸಿದ್ದರೆ ಭರ್ಜರಿ ಭರ್ಜರಿ ಬಹುಮತದಿಂದ ಗೆಲ್ಲುತ್ತಿದ್ದೆ: ಟ್ರಂಪ್ – vishwanews24

Featured, ಅಂತಾರಾಷ್ಟ್ರೀಯ ನ್ಯೂಸ್

ನಾನು ಸ್ಪರ್ಧಿಸಿದ್ದರೆ ಭರ್ಜರಿ ಭರ್ಜರಿ ಬಹುಮತದಿಂದ ಗೆಲ್ಲುತ್ತಿದ್ದೆ: ಟ್ರಂಪ್

ವಾಷಿಂಗ್ಟನ್:  ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷ ಮುನ್ನಡೆ ಸಾಧಿಸುತ್ತಿದೆ ಎಂಬ ಆರಂಭಿಕ ವರದಿಗಳ ನಡುವೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಸ್ಪರ್ಧಿಸಿದ್ದರೆ ಭರ್ಜರಿ ಬಹುಮತದಿಂದ ಗೆಲ್ಲುತ್ತಿದ್ದೆ ಎಂದು ಹೇಳುವ ಮೂಲಕ ಚುನಾವಣಾ ಫಲಿತಾಂಶದ ಬಗ್ಗೆ ತಮ್ಮದೇ ರೀತಿಯಲ್ಲಿ ಸಮರ್ಥನೆ ನೀಡಿದ್ದಾರೆ.

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷ ಗಮನಾರ್ಹ ಮುನ್ನಡೆ ಸಾಧಿಸುತ್ತಿರುವ ಬೆನ್ನಲ್ಲೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದಾರೆ. ಚುನಾವಣೆಯಲ್ಲಿ ತಾವು ಸ್ಪರ್ಧಿಸಿರಲಿಲ್ಲ, ಒಂದು ವೇಳೆ ಸ್ಪರ್ಧಿಸಿದ್ದರೆ ರಿಪಬ್ಲಿಕನ್ ಪಕ್ಷ ಭರ್ಜರಿ ಬಹುಮತದಿಂದ ಗೆಲ್ಲುತ್ತಿತ್ತು ಎಂದು ಹೇಳಿದ್ದಾರೆ. ತಮ್ಮ ಪಕ್ಷಕ್ಕೆ ಹಿನ್ನಡೆಯಾಗುತ್ತಿರುವ ಚರ್ಚೆಗಳ ನಡುವೆ ಟ್ರಂಪ್ ನೀಡಿರುವ ಈ ಹೇಳಿಕೆ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

ಮೀನು ಸಾಗಾಟ ವಾಹನಗಳ ವಿರುದ್ಧ ಪೊಲೀಸರ ಕಾರ್ಯಾಚರಣೆ: 604 ಪ್ರಕರಣ ದಾಖಲು, ₹3.02 ಲಕ್ಷ ದಂಡ ವಸೂಲಿ – vishwanews24

ಚುನಾವಣಾ ಫಲಿತಾಂಶಗಳ ಕುರಿತು ಟ್ರಂಪ್ ತಮ್ಮ ಸಾಮಾಜಿಕ ಜಾಲತಾಣವಾದ ಟ್ರೂತ್ ಸೋಷಿಯಲ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ನಾನು ಈ ಬಾರಿ ಮತಪತ್ರದಲ್ಲಿ ಇರಲಿಲ್ಲ. ಒಂದು ವೇಳೆ ಸ್ಪರ್ಧಿಸಿದ್ದರೆ ನಾವು ಭರ್ಜರಿ ಬಹುಮತದಿಂದ ಗೆಲ್ಲುತ್ತಿದ್ದೆವು” ಎಂದು ಅವರು ಹೇಳಿದ್ದಾರೆ. ಈ ಮೂಲಕ ಚುನಾವಣೆಯಲ್ಲಿ ತಮ್ಮ ಅನುಪಸ್ಥಿತಿಯೇ ಪಕ್ಷದ ಸಾಧನೆಗೆ ಸಂಬಂಧಿಸಿದ ಅಂಶ ಎಂಬ ರೀತಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನವೆಂಬರ್ 3ರಂದು ನಡೆದ ಮಧ್ಯಂತರ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಉತ್ತರ ಕೆರೊಲಿನಾದ ಸೆನೆಟ್ ಸ್ಥಾನವನ್ನು ರಿಪಬ್ಲಿಕನ್ ಪಕ್ಷದಿಂದ ಡೆಮಾಕ್ರಟಿಕ್ ಪಕ್ಷ ತನ್ನದಾಗಿಸಿಕೊಂಡಿದೆ. ಜಾರ್ಜಿಯಾದಲ್ಲಿ ಡೆಮಾಕ್ರಟಿಕ್ ಸೆನೆಟರ್ ಜಾನ್ ಒಸಾಫ್ ಮರು ಆಯ್ಕೆಯಾಗಿದ್ದಾರೆ. ದಕ್ಷಿಣ ಕೆರೊಲಿನಾದಲ್ಲೂ ಡೆಮಾಕ್ರಟಿಕ್ ಅಭ್ಯರ್ಥಿ ಮಹತ್ವದ ಗೆಲುವು ದಾಖಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ದೀಪಾವಳಿಗೆ ಮಂಗಳೂರು-ಬೆಂಗಳೂರು ಹೆಚ್ಚುವರಿ ವಿಶೇಷ ರೈಲು : ಕ್ಯಾ. ಬ್ರಿಜೇಶ್ ಚೌಟ ಮನವಿ – vishwanews24

 

Leave a Reply