ನಾಪತ್ತೆಯಾದ ಮೀನುಗಾರರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ವಿತರಣೆ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ನಾಪತ್ತೆಯಾದ ಮೀನುಗಾರರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಹಸ್ತಾಂತರ

ಮಂಗಳೂರು : ಮೇ 29 ರಂದು ಸಮುದ್ರಕ್ಕೆ ಹೋಗಿ ನಾಪತ್ತೆಯಾಗಿದ್ದ ಬೆಂಗ್ರೆಯ ಇಬ್ಬರು ಮೀನುಗಾರರ ಮನೆಗಳಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ್‌ ಎಸ್‌. ವೈದ್ಯ ಶುಕ್ರವಾರ ಭೇಟಿ ನೀಡಿದರು.

ಕುಟುಂಬಗಳಿಗೆ ಸಾಂತ್ವನ ಹೇಳಿದ ಸಚಿವರು, ಮೀನುಗಾರರ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂ.ಗಳ ಚೆಕ್ ಹಸ್ತಾಂತರಿಸಿದರು. ಕಾಣೆಯಾದ ಮೀನುಗಾರರ ಶೋಧ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಮತ್ತು ರಾಜ್ಯ ಸರ್ಕಾರದಿಂದ ಎಲ್ಲಾ ರೀತಿಯ ಬೆಂಬಲವನ್ನು ನೀಡುವುದಾಗಿ ಕುಟುಂಬಗಳಿಗೆ ಭರವಸೆ ನೀಡಿದರು.

ಕಾರಿಂಜ ದೇವಸ್ಥಾನದ ಕೆರೆಗೆ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವು – vishwanews24

ಕಾಣೆಯಾದ ಮೀನುಗಾರರ ಕುಟುಂಬಗಳಿಗೆ ಈ ಹಿಂದೆ ನೀಡಲಾಗುತ್ತಿದ್ದ ಪರಿಹಾರ ಮೊತ್ತ 8 ಲಕ್ಷ ರೂ.ಗಳಷ್ಟಿತ್ತು, ಆದರೆ ಈಗ ರಾಜ್ಯ ಸರ್ಕಾರ ಅದನ್ನು ಪ್ರತಿ ಕುಟುಂಬಕ್ಕೆ 10 ಲಕ್ಷ ರೂ.ಗಳಿಗೆ ಹೆಚ್ಚಿಸಿದೆ ಎಂದು ಸಚಿವರು ಮಾಹಿತಿ ನೀಡಿದರು.

ಶಾಸಕರಾದ ವೇದವ್ಯಾಸ್ ಕಾಮತ್ ಮತ್ತು ಐವನ್ ಡಿಸೋಜಾ, ಮೀನುಗಾರಿಕೆ ನಿರ್ದೇಶಕ ದಿನೇಶ್ ಕುಮಾರ್, ಜಂಟಿ ನಿರ್ದೇಶಕ ಸಿದ್ದಯ್ಯ, ಉಪ ನಿರ್ದೇಶಕ ದಿಲೀಪ್ ಕುಮಾರ್ ಮತ್ತು ವಿವಿಧ ಮೀನುಗಾರ ಸಂಘಗಳ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಾರಿಂಜ ದೇವಸ್ಥಾನದ ಕೆರೆಗೆ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವು – vishwanews24

Leave a Reply