ನಾಳೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ – ಉಳಿದ ಜಿಲ್ಲೆಗಳಲ್ಲಿ ಒಣ ಹವೆ : ಹವಾಮಾನ ಇಲಾಖೆ – Vishwanews24
ನಾಳೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ – ಉಳಿದ ಜಿಲ್ಲೆಗಳಲ್ಲಿ ಒಣ ಹವೆ : ಹವಾಮಾನ ಇಲಾಖೆ
ಬೆಂಗಳೂರು: ವಾತಾವರಣದಲ್ಲಿ ಉಂಟಾಗುತ್ತಿರುವ ಅಕಾಲಿಕ ವೈಪರಿತ್ಯಗಳಿಂದಾಗಿ ಬೇಸಿಗೆಯಲ್ಲೂ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸ್ಥಿತಿ ನಿರ್ಮಾಣವಾಗಿದೆ.
ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ 24ಗಂಟೆಯಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಕರ್ನಾಟಕ ಕೇಂದ್ರವು ಮುನ್ಸೂಚನೆ ನೀಡಿದೆ.
ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣವಾಗಿ ಮಳೆ ಬೀಳುವ ಸಾಧ್ಯತೆ ಇದೆ. ಇದೇ ಭಾಗದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಇದರೊಂದಿಗೆ ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ಸೋಮಣ್ಣ ಸೇರಿ ಯಾರೊಬ್ಬರೂ ಬಿಜೆಪಿ ಬಿಡುವುದಿಲ್ಲ : ಯಡಿಯೂರಪ್ಪ ಸ್ಪಷ್ಟನೆ – Vishwanews24
ಈಗಾಗಲೇ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಹಾಗೂ ದಾವಣಗೆರೆಯಲ್ಲಿ 13.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
