ನಾಳೆ ಗೋವಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಮದುವೆ -Vishwanews24
ನಾಳೆ ಗೋವಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಮದುವೆ -Vishwanews24
ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮದುವೆ ಅದ್ಧೂರಿಯಾಗಿ ನಾಳೆ ಗೋವಾದಲ್ಲಿ ನಡೆಯಲಿದೆ.
ಗೋವಾದ ಲೀಲಾ ಪ್ಯಾಲೇಸ್ ಹೋಟೆಲ್ನಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಹೆಬ್ಬಾಳ್ಕರ್ ಪುತ್ರ ಮೃಣಾಲ್, ಡಾ.ಹಿತಾ ಅವರ ಕೈಹಿಡಿಯಲಿದ್ದಾರೆ. ನಿನ್ನೆ ರಾತ್ರಿ ಮೆಹಂದಿ ಕಾರ್ಯಕ್ರಮ ನೆರವೇರಿದ್ದು, ಇಂದು ಹಳದಿ ಕಾರ್ಯಕ್ರಮ ನಡೆಯಲಿದೆ. ಡಾ.ಹಿತಾ ಅವರು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ ಸಹೋದರ ಬಿ.ಕೆ.ಶಿವಕುಮಾರ್ ಪುತ್ರಿ.
ನಾಳೆ ವಿವಾಹ ಸಮಾರಂಭದಲ್ಲಿ ಗಣ್ಯಾತಿಗಣ್ಯರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಕೋವಿಡ್ ಹಿನ್ನೆಲೆ ಆಪ್ತರು, ಗಣ್ಯರಿಗೆ ಮಾತ್ರ ವಿವಾಹ ಸಮಾರಂಭಕ್ಕೆ ಆಹ್ವಾನ ನೀಡಲಾಗಿದ್ದು, ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ ಪಾಲ್ಗೊಳ್ಳುವ ನಿರೀಕ್ಷೆ ಇದೆ.
500 ಅತಿಥಿಗಳಿಗೆ ಮಾತ್ರ ಆಹ್ವಾನ! ಕೊವಿಡ್ ಕಾರಣ ಕೆಲವೇ ಕೆಲವು ಗಣ್ಯರು ಮತ್ತು ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಮೂಲಗಳ ಪ್ರಕಾರ 500 ಗಣ್ಯರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಲಾಗಿದೆ. ಈಗಾಗಲೇ ವಿವಿಧ ಪಕ್ಷದ ನಾಯಕರು, ಚಲನಚಿತ್ರ ತಾರೆಯರು ಗೋವಾ ತಲುಪಿದ್ದು ಮದುವೆಗೆ ಸಾಕ್ಷಿಯಾಗಲಿದ್ದಾರೆ.
