ನಾಳೆ ಮಂಗಳೂರಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ..Vishwanews24
ನಾಳೆ ಮಂಗಳೂರಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ..Vishwanews24
ಮಂಗಳೂರು, : ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ರವರು ಫೆಬ್ರವರಿ 7 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಫೆಬ್ರವರಿ 7 ರಂದು ಬೆಳಿಗ್ಗೆ 9.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ 10.30ಕ್ಕೆ ಧರ್ಮಸ್ಥಳಕ್ಕೆ ಪ್ರಯಾಣಿಸಲಿದ್ದಾರೆ. 11.45 ಕ್ಕೆ ಧರ್ಮಸ್ಥಳದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಲಾದ ಚತುಷ್ದಥ ರಸ್ತೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
5 ಕೋಟಿ ಕೊಟ್ಟರೆ ಪ್ರಧಾನಿ ಮೋದಿ ಹತ್ಯೆ ಮಾಡುತ್ತೇನೆ ಎಂದಿದ್ದ ವ್ಯಕ್ತಿ ಇದೀಗ ಪೊಲೀಸರ ಅತಿಥಿ.. -Vishwanews24
12.15 ಕ್ಕೆ ಬೆಳ್ತಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯ ಪರಿವೀಕ್ಷಣಾ ಮಂದಿರದ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 5.15 ಗಂಟೆಗೆ ಮರವೂರು-ಮಂಗಳೂರು ತಾಲೂಕಿನ-ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ ನಂ.67ರ ರಸ್ತೆ ಕಿ.ಮೀ 12.98 ರಿಂದ 14.80 ಕಿ.ಮೀ ವರೆಗೆ ಚತುಷ್ಟದ ರಸ್ತೆ ನಿರ್ಮಾಣ ಕಾಮಗಾರಿಯ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 7.35 ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.
