ನಾಳೆ ರಾಜ್ಯದ ಐದು ಜಿಲ್ಲೆಗಳಲ್ಲಿ ಕೊರೋನಾ ಲಸಿಕೆ ವಿತರಣೆಯ ತಾಲೀಮು -Vishwanews24
ನಾಳೆ ರಾಜ್ಯದ ಐದು ಜಿಲ್ಲೆಗಳಲ್ಲಿ ಕೊರೋನಾ ಲಸಿಕೆ ವಿತರಣೆಯ ತಾಲೀಮು -Vishwanews24
ಬೆಂಗಳೂರು : ಕೇಂದ್ರ ಸರ್ಕಾರವು ದೇಶದ 4 ರಾಜ್ಯಗಳಲ್ಲಿ ಕೊರೋನಾ ಲಸಿಕೆ ವಿತರಣೆ ತಾಲೀಮು ನಡೆಸಲು ಸೂಚನೆ ನೀಡಿದೆ. ಕೇಂದ್ರ ಸರ್ಕಾರದ ಸೂಚನೆಯ ಹಿನ್ನಲೆಯಲ್ಲಿ ರಾಜ್ಯದ ಐದು ಜಿಲ್ಲೆಗಳಲ್ಲಿ ಕೊರೋನಾ ಲಸಿಕೆ ವಿತರಣೆಯ ತಾಲೀಮು ನಡೆಯಲಿದೆ.
ಇದಕ್ಕಾಗಿ ಕೋವಿನ್ ಅಪ್ಲಿಕೇಷನ್ ನಲ್ಲಿ ಲಸಿಕೆ ಪಡೆಯುತ್ತಿರುವವರ ಹೆಸರನ್ನು ನಮೂದಿಸಲಾಗಿದ್ದು, ರಾಜ್ಯದ ಬೆಂಗಳೂರು ನಗರ, ಶಿವಮೊಗ್ಗ, ಕಲಬುರ್ಗಿ, ಮೈಸೂರು ಹಾಗೂ ಬೆಳಗಾವಿಯಲ್ಲಿ ನಾಳೆ ಕೊರೋನಾ ಲಸಿಕೆ ವಿತರಣೆಯ ತಾಲೂಮು ನಡೆಯಲಿದೆ.
ಕಾಪು ಕರಂದಾಡಿ ವಾದ್ಯ ಬ್ಯಾಂಡು ನಾಗಸ್ವರದೊಂದಿಗೆ ವಿದ್ಯಾರ್ಥಿಗಳಿಗೆ ಶಾಲೆಗೆ ಸ್ವಾಗತ.
https://bit.ly/353cD5U
ಇದಕ್ಕಾಗಿ ರಾಜ್ಯ ಆರೋಗ್ಯ ಇಲಾಖೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಜಿಲ್ಲಾ ಮಟ್ಟದಲ್ಲಿ 1, ತಾಲೂಕು ಮಟ್ಟದಲ್ಲಿ 1 ಲಸಿಕಾ ಕೇಂದ್ರಗಳನ್ನು ತೆರೆಯಲಿದೆ. ಅಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡ್ರೈರನ್ ಇರಲಿದೆ. ಮೊದಲ ಹಂತವಾಗಿ ಆರೋಗ್ಯ ಕಾರ್ಯಕರ್ತರು, ಕೋವಿಡ್ ವಾರಿಯರ್ಸ್ ಗಳಿಗೆ ಲಸಿಕೆಯನ್ನು ಆದ್ಯತೆಮೇರೆಗೆ ನೀಡಲಾಗುತ್ತಿದೆ.
