ನಾಳೆಯೊಳಗೆ ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆಯಾಗಲಿದೆ : ಬಿ.ಎಸ್.ವೈ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಕರ್ನಾಟಕವೂ ಸೇರಿದಂತೆ ದೇಶದ ನಾಲ್ಕೈದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಒಟ್ಟಿಗೆ ಪರಿಹಾರ ಘೋಷಣೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಇಲ್ಲವೇ ನಾಳೆ ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆಯಾಗಲಿದೆ. ನೆರೆ ಪರಿಹಾರ ವಿಚಾರವಾಗಿ ಸಂಸದ ಪ್ರಹ್ಲಾದ್ ಜೋಷಿ ತಮ್ಮನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಕರ್ನಾಟಕವೂ ಸೇರಿದಂತೆ ದೇಶದ ನಾಲ್ಕೈದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಒಟ್ಟಿಗೆ ಪರಿಹಾರ ಘೋಷಣೆ ಮಾಡಲಿದೆ ಎಂದು ತಿಳಿಸಿದರು.

ಪ್ರವಾಹದಿಂದ ರಾಜ್ಯದಲ್ಲಿ ಸುಮಾರು 38 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ಮೊದಲಿಗೆ ಅಂದಾಜಿಸಲಾಗಿತ್ತು. ಜನರ ಆಸ್ತಿ-ಪಾಸ್ತಿ ಭಾರೀ ಪ್ರಮಾಣದಲ್ಲಿ ನಷ್ಟವಾಗಿದೆ. ಇದರಿಂದಾಗಿ ರಾಜ್ಯಕ್ಕೆ ದೊಡ್ಡ ಅನಾಹುತ ಸಂಭವಿಸಿದೆ. ಪ್ರವಾಹದಿಂದ 100ಕ್ಕೂ ಹೆಚ್ಚು ಜನ ಮೃತ ಪಟ್ಟಿದ್ದಾರೆ. 2 ಸಾವಿರಕ್ಕೂ ಹೆಚ್ಚು ಪ್ರಾಣಿಗಳು ಸಾವನ್ನಪ್ಪಿವೆ. 103 ತಾಲೂಕು ಪ್ರವಾಹಕ್ಕೆ ತುತ್ತಾಗಿದೆ. 7.82 ಲಕ್ಷ ಹೆಕ್ಟೇರ್ ಬೆಳೆ ನಷ್ಟ ಆಗಿದೆ ಎಂದು ರಾಜ್ಯ ಸರ್ಕಾರವೂ ಕೇಂದ್ರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ಪ್ರಸ್ತಾಪಿಸಿತ್ತು. ಅಲ್ಲದೇ 38,000 ಕೋಟಿ ನೆರೆ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿಯೂ ಮಾಡಲಾಗಿತ್ತು.