ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ, ಕುಮಾರಸ್ವಾಮಿಯವರು ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ. : ಸುರೇಶ್ ಗೌಡ -Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ಮಂಡ್ಯ: ಮೈತ್ರಿಯಿಲ್ಲವಾದರೆ ಉಪಚುನಾವಣೆಯಲ್ಲಿ ಜೆಡಿಎಸ್ 5 ರಿಂದ 6 ಕ್ಷೇತ್ರಗಳಲ್ಲಿ ಗೆಲ್ಲುತ್ತದೆ ಎಂದು ಶಾಸಕ ಸುರೇಶ್ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾಗಮಂಗಲದ ಶಾಸಕರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಕುಮಾರಸ್ವಾಮಿಯವರು ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ. ಮಂಡ್ಯ ಜಿಲ್ಲೆಗೆ ಕಾಂಗ್ರೆಸ್ ಉಸ್ತುವಾರಿ ನೇಮಿಸುವುದು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ಮೈತ್ರಿ ಮುಂದುವರಿಯ ಬೇಕೆ, ಅಥವಾ ಬೇಡವೆಂಬುದನ್ನು ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದರು.

ಸಂಸದೆ ಸುಮಲತಾ ಪ್ರತಿಸ್ಪರ್ಧಿ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮಗೆ ಯಾರು ಪ್ರತಿಸ್ಪರ್ಧಿ ಎಂಬುದು ಮುಖ್ಯವಲ್ಲ. ಕಾರ್ಯಕರ್ತರು ಯಾರು ಅಭ್ಯರ್ಥಿ ಎಂಬುದನ್ನು ತಿಳಿಸುತ್ತಾರೆ ಅದು ಮುಖ್ಯ. ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಸ್ಥಳೀಯ ಅಭ್ಯರ್ಥಿಗೆ ಅವಕಾಶ ನೀಡಲಾಗುವುದು, ನಿಖಿಲ್ ಸ್ಪರ್ಧೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆಯಾಗಿಲ್ಲ ಎಂದು ತಿಳಿಸಿದರು.