ನಿಗದಿತ ಸಮಯಕ್ಕೆ ಶಾಲೆಗೆ ಬಾರದೇ, ಗೈರು ಹಾಜರಾಗುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ : ಸಚಿವ ಬಿ.ಸಿ ನಾಗೇಶ್ ಎಚ್ಚರಿಕೆ – Vishwanews24
ನಿಗದಿತ ಸಮಯಕ್ಕೆ ಶಾಲೆಗೆ ಬಾರದೇ, ಗೈರು ಹಾಜರಾಗುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ :
ಸಚಿವ ಬಿ.ಸಿ ನಾಗೇಶ್ ಎಚ್ಚರಿಕೆ
ಬೆಂಗಳೂರು: ಶಾಲೆಗಳಿಗೆ ನಿಗದಿತ ಸಮಯಕ್ಕೆ ಬಾರದೇ ಹಾಗೂ ಕೆಲಸಕ್ಕೆ ಗೈರು ಹಾಜರಾಗುವ ಶಿಕ್ಷಕರ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವಂತ ಅವರು, ಶಾಲೆಗಳಿಗೆ ಸಮಯಕ್ಕೆ ಸರಿಯಾಗಿ ಶಿಕ್ಷಕರು ಹಾಜರಾಗಬೇಕು. ಪದೇ ಪದೇ ಗೈರು ಹಾಜರಾಗಬಾರದು. ಹೀಗೆ ಮಾಡುವ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಎಲ್ಲಾ ಜಿಲ್ಲೆ, ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸುವಂತೆ ತಿಳಿಸಿದ್ದಾರೆ.
ಇನ್ನೂ ಸಮಯಕ್ಕೆ ಸರಿಯಾಗಿ ಹಾಜರಾಗದಿರುವ ಹಾಗೂ ಮಕ್ಕಳು ಶಾಲಾವರಣದಲ್ಲಿ ಶಿಕ್ಷಕರಿಗಾಗಿ ಕಾಯುತ್ತಾ ಕೂರುವುದನ್ನು ಗಮನಿಸಿದ್ದೇನೆ. ಈ ಹಿನ್ನಲೆಯಲ್ಲಿಯೇ ಶಿಕ್ಷಕರು ಸಮಯಕ್ಕೆ ಸರಿಯಾಗಿ ಬರಬೇಕು. ಗೈರು ಹಾಜರಾಗದಂತೆ ಕ್ರಮ ಕೈಗೊಳ್ಳಲು ಖಡಕ್ ಸೂಚನೆ ನೀಡಿದ್ದಾರೆ.
ಸುರತ್ಕಲ್ ಫಾಝಿಲ್ ಕೊಲೆ ಪ್ರಕರಣ : ಆರೋಪಿಗಳಿಗೆ ಆಶ್ರಯ ನೀಡಿದ್ದಇನ್ನೋರ್ವನ ಬಂಧನ – Vishwanews24
