ನಿಮ್ಮ ಜಿಲ್ಲೆಯ ಕೋವಿಡ್ ನಿಯಂತ್ರಣದ ಬಗ್ಗೆ ತ್ವರಿತ ಕ್ರಮ ಕೈಗೊಳ್ಳಿ : ಸಚಿವರಿಗೆ ಸಿಎಂ -Vishwanews24

Featured, ರಾಜ್ಯ ನ್ಯೂಸ್

ನಿಮ್ಮ ಜಿಲ್ಲೆಯ ಕೋವಿಡ್ ನಿಯಂತ್ರಣದ ಬಗ್ಗೆ ತ್ವರಿತ ಕ್ರಮ ಕೈಗೊಳ್ಳಿ : ಸಚಿವರಿಗೆ ಸಿಎಂ  -Vishwanews24

ಬೆಂಗಳೂರು : ಕೋವಿಡ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು, ಉಸ್ತುವಾರಿ ಜಿಲ್ಲೆಯ ಪರಿಸ್ಥಿತಿಯನ್ನು ಅವಲೋಕಿಸಿ ತ್ವರಿತ ಕ್ರಮ‌ ಕೈಗೊಳ್ಳುವಂತೆ ಸೂಚನೆ ನೀಡಿ, ಎಲ್ಲಾ ಜಿಲ್ಲೆಯ ಉಸ್ತುವಾರಿ ಸಚಿವರುಗಳಿಗೆ ಸಿಎಂ ಯಡಿಯೂರಪ್ಪ ಬುಧವಾರ ಪತ್ರ ಬರೆದಿದ್ದಾರೆ.

ಸಚಿವರಿಗೆ ಪತ್ರ ಬರೆದಿರುವ ಸಿಎಂ ಯಡಿಯೂರಪ್ಪ, ಕೋವಿಡ್ ವೈರಾಣುವಿನ 2ನೇ ಅಲೆ ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರವು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿರುವುದು ನಿಮಗೆ ಗೊತ್ತಿದೆ. ಇದೇ ನಿಟ್ಟಿನಲ್ಲಿ ಪ್ರತೀ ಜಿಲ್ಲೆಯಲ್ಲಿಯೂ ತ್ವರಿತ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.

ಈ ಹಿನ್ನೆಲೆಯಲ್ಲಿ ತಾವುಗಳು ತಮ್ಮ ಉಸ್ತುವಾರಿ ಜಿಲ್ಲೆಯ ಜಿಲ್ಲಾಡಳಿತದೊಂದಿಗೆ ಸತತ ಸಂಪರ್ಕದಲ್ಲಿದ್ದು, ಜನರಲ್ಲಿ ಸೋಂಕು ಹರಡುವಿಕೆ ನಿಯಂತ್ರಣ ಕುರಿತು ಮುನ್ನೆಚ್ಚರಿಕೆ ವಹಿಸಿ. ವೈದ್ಯಕೀಯ ಸೌಲಭ್ಯಗಳು ಸಿಗುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಿ ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ನಟಿ ಅನು ಪ್ರಭಾಕರ್‌ಗೆ ಕೊರೊನಾ ಪಾಸಿಟಿವ್ -Vishwanews24