ನಿಮ್ಮ ಮಂಗಳೂರು ಭೇಟಿ ವಿಕಾಸಕ್ಕೋ? ವಿನಾಶಕ್ಕೋ : ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ – Vishwanews24
ನಿಮ್ಮ ಮಂಗಳೂರು ಭೇಟಿ ವಿಕಾಸಕ್ಕೋ? ವಿನಾಶಕ್ಕೋ : ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ
ಮಂಗಳೂರು: ಕಡಲನಗರಿ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಂತೆಯೇ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ವಾರ್ ಶುರುಮಾಡಿದ್ದಾರೆ. ಮೋದಿಗೆ ಟ್ವೀಟ್ ಮೂಲಕ ಸಿದ್ದರಾಮಯ್ಯ ಪ್ರಶ್ನೆ ಮೇಲೆ ಪ್ರಶ್ನೆ ಕೇಳಿದ್ದಾರೆ. ನಿಮ್ಮ ಮಂಗಳೂರು ಭೇಟಿ ವಿಕಾಸಕ್ಕೋ? ವಿನಾಶಕ್ಕೋ ಎಂದು ಲೇವಡಿ ಮಾಡಿದ್ದಾರೆ.
“ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರಮೋದಿಯವರಿಗೆ ಮಂಗಳೂರಿಗೆ ಸ್ವಾಗತ. ದಕ್ಷಿಣ ಕನ್ನಡದ ಉದ್ಯಮಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು ಬ್ಯಾಂಕ್ ಗಳನ್ನು ಹುಟ್ಟುಹಾಕಿದ್ದರು. ನೀವು ಇವುಗಳಲ್ಲಿ ಮೂರು ಬ್ಯಾಂಕುಗಳ ನಾಮಾವಶೇಷ ಮಾಡಿದ್ದೀರಿ.ಇದು ವಿಕಾಸವೋ? ವಿನಾಶವೋ ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ” ಎಂದು ಕಾಳೆಲೆದಿದ್ದಾರೆ.
ಇಂದು ಪ್ರಧಾನಿ ಮಂಗಳೂರಿಗೆ- ತುಳು ಭಾಷೆ ಮಾನ್ಯತೆಗೆ 50 ಸಾವಿರಕ್ಕೂ ಅಧಿಕ ಟ್ವೀಟ್ – Vishwanews24
ಕಾರ್ಪೋರೇಷನ್ ಬ್ಯಾಂಕ್ ಸ್ಥಾಪಕರು- ಹಾಜಿ ಅಬ್ದುಲ್ಲಾ (1906)ಸಿಂಡಿಕೇಟ್ ಬ್ಯಾಂಕ್ ಸ್ಥಾಪಕರು ಟಿಎಂಎ ಪೈ, ಉಪೇಂದ್ರ ಪೈ, ವಾಮನ್ ಕುಡ್ವಾ (1925)ವಿಜಯಾ ಬ್ಯಾಂಕ್ ಸ್ಥಾಪಕರು- ಎ.ಬಿ.ಶೆಟ್ಟಿ (1931)ಪ್ರಧಾನಿ ನರೇಂದ್ರ ಮೋದಿಯವರೇ, ನಿಮ್ಮ ನಡೆ ಈ ಅಮರವೀರರಿಗೆ ಬಗೆದ ದ್ರೋಹವಲ್ಲವೇ? ಬಜ್ಪೆ ವಿಮಾನ ನಿಲ್ದಾಣ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಕೊಡುಗೆ.(25-12-1971) ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ಈ ವಿಮಾನ ನಿಲ್ದಾಣವನ್ನು ನೀವು ಉದ್ಯಮಿ ಮಿತ್ರ ಅದಾನಿಯವರಿಗೆ ಅರ್ಪಿಸಿದಿರಿ . ನವಮಂಗಳೂರು ಬಂದರು ಮಾಜಿ ಪ್ರಧಾನಿ ಇಂದಿರಾಗಾಂಧಿ ಕೊಡುಗೆ (1975). ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ.ನವಮಂಗಳೂರು ಬಂದರನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರುತ್ತಿರುವುದು ಯತ್ನಿಸುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
