ನೀತಿ ಸಂಹಿತೆ ಉಲ್ಲಂಘನೆ : ಕೋಟ ಶ್ರೀನಿವಾಸ ಪೂಜಾರಿ ಮತ್ತು ಗುರ್ಮೆ ಸುರೇಶ್‌ ಶೆಟ್ಟಿ ವಿರುದ್ಧದ ಪ್ರಕರಣ ರದ್ದು – vishwanews24

Featured, ಉಡುಪಿ, ರಾಜ್ಯ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ :ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

ಬೆಂಗಳೂರು: ಚುನಾವಣ ಅಧಿಕಾರಿಗಳ ಅನುಮತಿ ಪಡೆಯದೇ ಕಾರ್ಯಕ್ರಮ ಆಯೋಜಿಸಿದ ಮತ್ತು ವಿದ್ಯಾರ್ಥಿಗಳಿಗೆ ಆಮಿಷವೊಡ್ಡಿದ ಆರೋಪದಲ್ಲಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ವಿರುದ್ದ ದಾಖಲಿಸಲಾಗಿದ್ದ ಚುನಾವಣ ನೀತಿ ಸಂಹಿತೆ ಉಲ್ಲಂಘನೆಯ ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಪ್ರಕರಣ ರದ್ದುಪಡಿಸುವಂತೆ ಕೋರಿ ಆರೋಪಿಗಳಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಮೆಂಡನ್‌ ಮತ್ತು ತ್ರಿಶಾ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎನ್‌. ಎಸ್‌. ಗೋಪಾಲಕೃಷ್ಣ ಸಲ್ಲಿಸಿದ್ದ ರಿಟ್‌ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಶುಕ್ರವಾರ ವಿಚಾರಣೆ ನಡೆಸಿತು. ವಾದವನ್ನು ಪರಿಗಣಿಸಿದ ನ್ಯಾಯಪೀಠ ಪ್ರಕರಣ ರದ್ದುಪಡಿಸಿ ಆದೇಶಿಸಿತು.

ಚನ್ನಪಟ್ಟಣ ಉಪಚುನಾವಣೆ : ನಿಖಿಲ್ ಕುಮಾರಸ್ವಾಮಿ ಗೆ ಭಾರಿ ಆಘಾತ , 15000 ಮತಗಳಿಂದ ಸಿಪಿ ಯೋಗೇಶ್ವರ್ ಭಾರಿ ಮುನ್ನಡೆ – vishwanews24

Leave a Reply