ನೂತನ ಪಕ್ಷದ ಮೂಲಕ ರಾಜಕೀಯಕ್ಕೆ ಕಾಲಿಟ್ಟ ತಮಿಳು ನಟ ದಳಪತಿ ವಿಜಯ್ – vishwanews24
ನೂತನ ಪಕ್ಷದ ಮೂಲಕ ರಾಜಕೀಯಕ್ಕೆ ಕಾಲಿಟ್ಟ ತಮಿಳು ನಟ ದಳಪತಿ ವಿಜಯ್
ಚೆನೈ : ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಕಾಲಿಟ್ಟಿದ್ದು, ಅಂತಿಮವಾಗಿ ತಮ್ಮ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ ಅನ್ನು ಇಂದು ಪ್ರಾರಂಭಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿದ ನಟ ವಿಜಯ್ “ನಾವು 2024 ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಜೊತೆಗೆ ನಾವು ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ. ನಾವು ಈ ನಿರ್ಧಾರವನ್ನು ಸಾಮಾನ್ಯ ಹಾಗೂ ಕಾರ್ಯಕಾರಿ ಮಂಡಳಿ ಸಭೆಗಾಗಿ ಮಾಡಿದ್ದೇವೆ” ಎಂದರು.
#தமிழகவெற்றிகழகம் #TVKVijay https://t.co/Szf7Kdnyvr
— Vijay (@actorvijay) February 2, 2024
ಇನ್ನು ನಟ ವಿಜಯ್ ಅವರು ತಮಿಳಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷರಾಗಿರುತ್ತಾರೆ. ಅವರು ಚುನಾವಣಾ ಆಯೋಗದಲ್ಲಿ ಪಕ್ಷದ ಹೆಸರನ್ನು ನೋಂದಣಿ ಮಾಡಿದ್ದಾರೆ. ಈ ಮೂಲಕ ತಮಿಳು ಸಿನಿಮಾ ರಂಗದಲ್ಲಿ ಹಾಗೂ ರಾಜಕೀಯದಲ್ಲಿ ಹೊಸ ತಿರುವು ಪಡೆದುಕೊಳ್ಳಲಿದೆ.
