ನೂತನ ಸಭಾಧ್ಯಕ್ಷರಾಗಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧ ಆಯ್ಕೆ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಕೆ.ಆರ್‌ ರಮೇಶ್‌ ಕುಮಾರ್‌ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನಸಭೆ ಸಭಾಪತಿ ಸ್ಥಾನಕ್ಕೆ ಶಿರಸಿಯ ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಂಗಳವಾರ ಬೆಳಗ್ಗೆ 11.30ರ ಸುಮಾರಿನಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿಗೆ ಅವರಿಗೆ ನಾಮಪತ್ರ ಸಲ್ಲಿಸಿದರು. ಕಾಗೇರಿ ಅವರನ್ನು ಹೊರತುಪಡಿಸಿ ಮತ್ತ್ಯಾರೂ ಸ್ಪೀಕರ್‌ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರ ಆಯ್ಕೆಯನ್ನು ಬುಧವಾರ ಸದನದಲ್ಲಿ ಪ್ರಕಟಿಸಲಾಯಿತು. ಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತು ಅವರು ಕಾರ್ಯಾರಂಭ ಮಾಡಿದರು.