ನೇಜಾರು ಹತ್ಯೆ ಪ್ರಕರಣ : ಸಾಕ್ಷಿ ವಿಚಾರಣೆ ಆ.24ಕ್ಕೆ ಮುಂದೂಡಿಕೆ – vishwanews24

Featured, ಉಡುಪಿ

ನೇಜಾರು ಹತ್ಯೆ ಪ್ರಕರಣ : ಸಾಕ್ಷಿ ವಿಚಾರಣೆ ಆ.24ಕ್ಕೆ ಮುಂದೂಡಿಕೆ

ಉಡುಪಿ : ಉಡುಪಿ ನೇಜಾರಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯಾಕಾಂಡ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರರಕರಣದ ವಿಚಾರಣೆಯನ್ನು ಆ.24ಕ್ಕೆ ಮುಂದೂಡಿ ಆದೇಶ ನೀಡಿದೆ.

ಭೂಕುಸಿತದಿಂದ ಮುಚ್ಚಿರುವ ರಸ್ತೆ : ಕುಂದಾಪುರ – ಬೆಂಗಳೂರು ವಿಶೇಷ ರಾತ್ರಿ ರೈಲು ಸೇವೆಗೆ ಕೋಟ ಆಗ್ರಹ – vishwanews24

ತನಗೆ ಹಾಗೂ ತನ್ನ ವಕೀಲರಿಗೆ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಉಡುಪಿ ಕೋರ್ಟ್‌ನಲ್ಲಿ ನಡೆಯುತ್ತಿರುವ ಈ ಪ್ರಕರಣದ ವಿಚಾರಣೆಯನ್ನು ಬೆಂಗಳೂರು ಕೋರ್ಟ್‌ಗೆ ವರ್ಗಾಯಿಸುವಂತೆ ಕೊಲೆ ಆರೋಪಿ ಪ್ರವೀಣ್ ಚೌಗುಲೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದನು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ, ಈ ಅರ್ಜಿಯ ಮುಂದಿನ ವಿಚಾರಣೆ ನಡೆಸುವವರೆಗೆ ಉಡುಪಿ ಕೋರ್ಟ್‌ನಲ್ಲಿನ ವಿಚಾರಣೆಗೆ ತಡೆ ನೀಡಿ ಆದೇಶ ನೀಡಿದರು. ಆ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ಜು.18ರಂದು ನಡೆಯಬೇಕಾಗಿದ್ದ ಸಾಕ್ಷಿಗಳ ವಿಚಾರಣೆಯನ್ನು ಆ.24ಕ್ಕೆ ಮುಂದೂಡಿ ನ್ಯಾಯಾಧೀಶರು ಆದೇಶ ನೀಡಿದರು ಎಂದು ಮೂಲಗಳು ತಿಳಿಸಿವೆ. ಈ ಸಂದರ್ಭ ಬೆಂಗಳೂರಿನ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.

ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜು. 23 ಮತ್ತು 24ರಂದು ವೈಭವದ ಆಟಿ ಮಾರಿಪೂಜೆ ಸಂಭ್ರಮ – vishwanews24 https://wp.me/p9KQap-oSr

Leave a Reply