ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ – vishwanews24
ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ
ವಿದ್ಯಾರ್ಥಿನಿಯ ನಿಗೂಢ ಸಾವಿಗೆ ಪೋಷಕರ ಅನುಮಾನ
ಹಾಸನ: ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಯುವತಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿದೆ.
ನಗರದ ಸಾಕಮ್ಮ-ಮಂಜಶೆಟ್ಟಿ ದಂಪತಿ ಪುತ್ರಿ ರಚಿತಾ (19) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವತಿ. ಈಕೆ ಮೊದಲ ವರ್ಷದ ಬಿಎ ಓದುತ್ತಿದ್ದಳು. ಆ.21 ರ ರಾತ್ರಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಪೋಷಕರು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:
ಯುವತಿ ಸುಮಾರು ಒಂದುವರೆ ವರ್ಷದಿಂದ ನವೀನ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ನವೀನ್ ಪಟ್ಟಣದ ರೇಣುಕಾಂಬ ರಸ್ತೆಯಲ್ಲಿರುವ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಇದೇ ಬೇಕರಿಯಲ್ಲಿ ರಚಿತಾ ತಾಯಿ ಸಾಕಮ್ಮ ಕೆಲಸ ಮಾಡುತ್ತಿದ್ದರು. ಇಬ್ಬರು ಪ್ರೀತಿಸುವ ವಿಷಯವನ್ನು ಸಾಕಮ್ಮ ಬಳಿ ರಚಿತಾ ಹಾಗೂ ನವೀನ್ ಹೇಳಿದ್ದರು. ಮದುವೆ ಮಾಡಿಸುವುದಾಗಿ ರಚಿತಾ ತಾಯಿ ಭರವಸೆಕೊಟ್ಟಿದ್ದರು. ಆದರೆ ಇತ್ತೀಚಿಗೆ ರಚಿತಾಳಿಗೆ ನವೀನ್ ಕಿರುಕುಳ ನೀಡುತ್ತಿದ್ದ ಎಂದು ಸಾಕಮ್ಮ ಆರೋಪಿಸಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ: ಸುಮಂತ್ ಸಾವಿನ ಪ್ರಕರಣ; ಬ್ರೈನ್ ಮ್ಯಾಪಿಂಗ್, ನಾರ್ಕೋ ಪರೀಕ್ಷೆ ಆರಂಭ – vishwanews24
