ನೇಪಾಳ ಪ್ರವಾಹ: ಸಾವಿನ ಸಂಖ್ಯೆ 626 ಕ್ಕೆ ಏರಿಕೆ , 2500ಕ್ಕೂ ಹೆಚ್ಚು ಮಂದಿ ನಾಪತ್ತೆ – vishwanews24
ನೇಪಾಳ ಪ್ರವಾಹ: ಸಾವಿನ ಸಂಖ್ಯೆ 626 ಕ್ಕೆ ಏರಿಕೆ , 2500ಕ್ಕೂ ಹೆಚ್ಚು ಮಂದಿ ನಾಪತ್ತೆ
ಕಠ್ಮಂಡು: ನೇಪಾಳ-ಚೀನಾ ಗಡಿಯ ಸಮೀಪದ ಹಿಮನದಿ ಕುಸಿದು ಸಂಭವಿಸಿದ ಭೀಕರ ಪ್ರವಾಹದಿಂದಾಗಿ ಬಲಿಯಾದವರ ಸಂಖ್ಯೆ 626ಕ್ಕೆ ಏರಿಕೆಯಾಗಿದೆ. ಈಗಾಗಲೇ 4,400ಕ್ಕೂ ಅಧಿಕ ಜನರನ್ನು ರಕ್ಷಣೆ ಮಾಡಲಾಗಿದ್ದು, 2,400ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ.
ಹಿಮನದಿ ಕುಸಿದು ಲ್ಹೆಂಡೆ ಖೋಲಾ ನದಿಗೆ ಭಾರಿ ಪ್ರಮಾಣದ ಮಂಜುಗಡ್ಡೆ, ಬಂಡೆಗಳು ಹರಿದು ಬಂದು ಭೋಟೆ ಕೋಶಿ ನದಿಗೆ ನೀರು ನುಗ್ಗಿದೆ. ಪರಿಣಾಮ ರಸುವಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಹಾನಿಯನ್ನುಂಟು ಮಾಡಿದೆ. ಈವರೆಗೂ ದುರಂತದಲ್ಲಿ 626 ಮಂದಿ ಸಾವನ್ನಪ್ಪಿದ್ದಾರೆ ಎಂದು ನೇಪಾಳ ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:
ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್. ಅಶೋಕ್ – vishwanews24
ಇನ್ನೂ ಇದೇ ಪ್ರವಾಹದಿಂದಾಗಿ ಚೀನಾದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಇದಲ್ಲದೇ ಟಿಬೆಟ್ ಹಾಗೂ ನೇಪಾಳದಲ್ಲಿ ಸುಮಾರು 2,500ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ.
ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿರುವ ಹಿನ್ನೆಲೆ, ಇಲ್ಲಿನ ಸರ್ಕಾರದ ಮನವಿಯ ಮೇರೆಗೆ ವೈದ್ಯಕೀಯ ಸಿಬ್ಬಂದಿ ಮತ್ತು ಸುರಂಗ ರಕ್ಷಣಾ ತಜ್ಞರನ್ನು ಒಳಗೊಂಡ 11 ಸದಸ್ಯರ ಭಾರತೀಯ ತಂಡವು ಶನಿವಾರ (ಆ.29) ನೇಪಾಳಕ್ಕೆ ತಲುಪಿದೆ. ಪ್ರವಾಹದಿಂದ ತೀವ್ರವಾಗಿ ಹಾನಿಗೊಳಗಾದ ಪ್ರದೇಶಗಳಲ್ಲಿ ಸ್ಥಳೀಯ ಅಧಿಕಾರಿಗಳಿಗೆ ಸಹಾಯ ಮಾಡಲು ಈ ತಂಡವು ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲಿದೆ.
ಬುಧವಾರ (ಆ.26) ಸಂಭವಿಸಿದ ಈ ಪ್ರವಾಹದಿಂದ ರಸುವಾ ಮತ್ತು ಮಧ್ಯ ನೇಪಾಳದ ಇತರ ಭಾಗಗಳಲ್ಲಿ ಮನೆಗಳು, ರಸ್ತೆಗಳು, ಸೇತುವೆಗಳು ಮತ್ತು ಜಲವಿದ್ಯುತ್ ಮೂಲಸೌಕರ್ಯಗಳಿಗೆ ವ್ಯಾಪಕ ಹಾನಿಯಾಗಿದೆ. ಇದರ ನಡುವೆಯೂ ರಕ್ಷಣಾ ತಂಡಗಳು ನಾಪತ್ತೆಯಾಗಿರುವವರ ಹುಡುಕಾಟವನ್ನು ಮುಂದುವರೆಸಿವೆ.
ಇದನ್ನೂ ಓದಿ:
ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್. ಅಶೋಕ್ – vishwanews24
