ಪಂಚ ಗ್ಯಾರಂಟಿ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎಂದು ಈ ಫಲಿತಾಂಶ ತೋರುತ್ತದೆ : ಲಕ್ಷ್ಮೀ ಹೆಬ್ಬಾಳ್ಕರ್ – vishwanews24

Featured, ರಾಜ್ಯ ನ್ಯೂಸ್

ಪಂಚ ಗ್ಯಾರಂಟಿ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎಂದು ಈ ಫಲಿತಾಂಶ ತೋರುತ್ತದೆ : ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹರ್ಷ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರು, ಉಪ ಮುಖ್ಯಮಂತ್ರಿಗಳು ಆದ ಡಿ.ಕೆ.ಶಿವಕುಮಾರ್ ಸಾರಥ್ಯದ ರಾಜ್ಯ ಸರಕಾರಕ್ಕೆ ಸಿಕ್ಕ ಗೆಲುವು ಇದಾಗಿದೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎಂದು ಈ ಫಲಿತಾಂಶ ತೋರುತ್ತದೆ ಎಂದು ಸಚಿವರು ಹೇಳಿದ್ದಾರೆ.

ಉಡುಪಿ : ಉಪಚುನಾವಣೆ ಗೆಲುವು ಹಿನ್ನೆಲೆ, ಕಾಂಗ್ರೆಸ್‌ನಿಂದ ಸಂಭ್ರಮಾಚರಣೆ – vishwanews24

ಉಪಚುನಾವಣೆ ಫಲಿತಾಂಶದ ಮೂಲಕ ಮೂರು ಕ್ಷೇತ್ರಗಳ ಮತದಾರರು ವಿಪಕ್ಷಗಳಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಮೂರು ಕ್ಷೇತ್ರಗಳ ಮತದಾರರು ಅಭಿವೃದ್ಧಿ ಕಾರ್ಯಗಳಿಗೆ ಮತ ಹಾಕಿದ್ದು, ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದ ವಿರೋಧ ಪಕ್ಷಗಳಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದಿದ್ದಾರೆ.

Leave a Reply