ಪಕ್ಷಾಂತರ ಪರ್ವ ಆರಂಭ : ನಾಳೆ ಶಾಸಕ ಹೆಚ್. ನಾಗೇಶ್ ಕಾಂಗ್ರೆಸ್ ಸೇರ್ಪಡೆ – Vishwanews24

Featured, ರಾಜ್ಯ ನ್ಯೂಸ್

ಪಕ್ಷಾಂತರ ಪರ್ವ : ನಾಳೆ ಶಾಸಕ ಹೆಚ್. ನಾಗೇಶ್ ಕಾಂಗ್ರೆಸ್ ಸೇರ್ಪಡೆ

ಕೋಲಾರ : ಚುನಾವಣೆ ಹೊತ್ತಲ್ಲೇ ಪಕ್ಷಾಂತರ ಪರ್ವ ಶುರುವಾಗಿದ್ದು, ಬಿಜೆಪಿ ಬೆಂಬಲಿತ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಹೆಚ್.ನಾಗೇಶ್ ಜನವರಿ 14 ರಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದಾಗಿ ಖಚಿತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ನಾಗೇಶ್, ಜನವರಿ 14ರಂದು ನಾಳೆ ಸಂಕ್ರಾಂತಿಯಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ.

ಉಡುಪಿ ಜಿಲ್ಲೆಯ ರಜತ ಮಹೋತ್ಸವ-2023 : ಜ. 21ರಂದು ಕಾಪು ಕಡಲ ಕಿನಾರೆಯಲ್ಲಿ ಸಂಭ್ರಮಾಚರಣೆ – Vishwanews24

ರಾಜೀನಾಮೆ ನೀಡಿರುವ ವಿಚಾರವನ್ನು ಈವರೆಗೂ ಯಾರ ಜೊತೆಗೂ ಚರ್ಚೆ ಮಾಡಿಲ್ಲ. ಸಧ್ಯಕ್ಕೆ ಬಿಜೆಪಿ ಸರ್ಕಾರದ ಬಗ್ಗೆ ಏನೂ ಮಾತನಾಡಲ್ಲ. ಕಾಂಗ್ರೆಸ್ ವರಿಷ್ಠರು ಯಾವ ಕ್ಷೇತ್ರ ಹೇಳ್ತಾರೋ ಆ ಕ್ಷೇತ್ರದಿಂದ ಸ್ಪರ್ಧೆ ಮಾಡ್ತೇನೆ ಎಂದರು.

ಇನ್ನು ನಾಳೆ ಜೆಡಿಎಸ್ ನಾಯಕ ವೈಎಸ್ ವಿ ದತ್ತಾ ಹಾಗೂ ಹೆಚ್. ನಾಗೇಶ್ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Leave a Reply