ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಸೇರ್ಪಡೆಗೆ ರಾಜ್ಯ ಸರಕಾರದ ನಿರ್ಧಾರ ಸ್ವಾಗತಾರ್ಹ : ಯಶ್ ಪಾಲ್ ಸುವರ್ಣ – Vishwanews24

Featured, ಉಡುಪಿ

ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಸೇರ್ಪಡೆಗೆ ರಾಜ್ಯ ಸರಕಾರದ ನಿರ್ಧಾರ ಸ್ವಾಗತಾರ್ಹ : ಯಶ್ ಪಾಲ್ ಸುವರ್ಣ – Vishwanews24

ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ  ಸೇರ್ಪಡೆಗೊಳಿಸಿ ದೇಶದ ಸಧೃಢ ಭವಿಷ್ಯ ವನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರವಹಿಸಲಿರುವ ವಿದ್ಯಾರ್ಥಿಗಳಿಗೆ ನೈತಿಕ ಮೌಲ್ಯಗಳನ್ನು ತುಂಬಲು ಪೂರಕವಾಗಿರಲಿರುವ ರಾಜ್ಯ ಸರಕಾರದ ನಿರ್ಧಾರವನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಸ್ವಾಗತಿಸಿದ್ದಾರೆ.
ದೇಶದಾದ್ಯಂತ  ಮತೀಯವಾದಿಗಳು ದೇಶದ ಶಿಕ್ಷಣ ವ್ಯವಸ್ಥೆಯನ್ನು ನಾಶಗೊಳಿಸಿ, ಬಡ ವಿದ್ಯಾರ್ಥಿಗಳ ಶಿಕ್ಷಣದ ಹಕ್ಕನ್ನು ಮೊಟಕುಗೊಳಿಸಿ, ಹೈಕೋರ್ಟ್ ತೀರ್ಪುಗಳನ್ನೇ ಬಹಿರಂಗವಾಗಿ ಧಿಕ್ಕರಿಸಿರುವ ಈ ಸಂದರ್ಭದಲ್ಲಿ ರಾಜ್ಯ ಸರಕಾರದ ಭಗವದ್ಗೀತೆ ಸೇರ್ಪಡೆ ಚಿಂತನೆ ಅತ್ಯಂತ ಸಮಂಜಸವಾಗಿದೆ.
 ಗುಜರಾತ್ ಸರಕಾರದ ಮಾದರಿಯಲ್ಲೇ ರಾಜ್ಯ ಸರಕಾರ ಶಿಕ್ಷಣ ವ್ಯವಸ್ಥೆಯಲ್ಲಿ ಇಸ್ಲಾಮೀಕರಣದ ಷಡ್ಯಂತ್ರವನ್ನು  ರೂಪಿಸುತ್ತಿರುವ ರಾಷ್ಟ್ರವಿರೋಧಿಗಳಿಗೆ ಈ ಮೂಲಕ ತಕ್ಕ ಉತ್ತರ ನೀಡಿದಂತಾಗಿದೆ.
ಹಿಜಾಬ್ ತೀರ್ಪು ವಿರೋಧಿಸಿ ಮುಸ್ಲಿಂ ಸಂಘಟನೆಗಳು ಬಂದ್ ಕರೆ ನೀಡಿದ್ದ ಸಂದರ್ಭದಲ್ಲಿ  ಜಿಲ್ಲೆಯಾದ್ಯಂತ ಮುಸ್ಲಿಂ ಬಸ್ ಮಾಲಕರು ಯಾವುದೇ ಪೂರ್ವಮಾಹಿತಿ ನೀಡದೇ ಬಸ್ ಸಂಚಾರ ಸ್ಥಗಿತಗೊಳಿಸಿ ವಿದ್ಯಾರ್ಥಿಗಳು, ದಿನನಿತ್ಯ ಬಸ್ ಅವಲಂಬಿಸಿರುವ ಬಡ ಮಹಿಳೆಯರು ಹಾಗೂ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಶೀಘ್ರದಲ್ಲೇ ಸರಕಾರಿ ಬಸ್ ಸೇವೆ ಒದಗಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ.
ಕಾಪು ಮಾರಿಗುಡಿ ವ್ಯವಸ್ಥಾಪನಾ ಸಮಿತಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮನವಿಗೆ ಸ್ಪಂದಿಸಿ ಮಾರಿಜಾತ್ರೆ ಸಂದರ್ಭದಲ್ಲಿ ಹಿಂದುಯೇತರರಿಗೆ ಅಂಗಡಿ ಮಳಿಗೆಗೆ ಅವಕಾಶ ನೀಡದಿರುವ ನಿರ್ಧಾರ ಇತರ ದೇವಸ್ಥಾನ ಮಂದಿರಗಳಲ್ಲೂ ಮುಂದುವರಿಸಿ ಮತಾಂಧರೊಂದಿಗೆ ವ್ಯವಹಾರಕ್ಕೆ ಕಡಿವಾಣ ಹಾಕಬೇಕಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply