ಪಠ್ಯ ಪುಸ್ತಕದಿಂದ ಟಿಪ್ಪು ಪಾಠವನ್ನು ಕೈಬಿಡುವಂತೆ ಸರ್ಕಾರಕ್ಕೆ ಪತ್ರ ಬರೆದ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ -Vishwanews24

Featured, ರಾಜ್ಯ ನ್ಯೂಸ್

ಮಡಿಕೇರಿ : ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರನಲ್ಲ, ಆದರೆ, ಪಠ್ಯ ಪುಸ್ತಕಗಳಲ್ಲಿ ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಎಂದು ವೈಭವೀಕರಿಸಲಾಗಿದೆ ಹೀಗಾಗಿ ಪಠ್ಯ ಪುಸ್ತಕದಿಂದ ಟಿಪ್ಪು ಪಾಠವನ್ನು ಕೈಬಿಡುವಂತೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಪತ್ರ ಬರೆದಿರುವ ಅಪ್ಪಚ್ಚು ರಂಜನ್, ಟಿಪ್ಪು ಸುಲ್ತಾನ್ ಫ್ರೆಂಚ್ ರೊಂದಿಗೆ ಕೈ ಜೋಡಿಸಿದ್ದ. ತನ್ನ ಸಾಮ್ರಾಜ್ಯ ವಿಸ್ತರಿಸಿಕೊಳ್ಳಲು ಫ್ರೆಂಚ್ಸಹಾಯ ಪಡೆಯುತ್ತಿದ್ದನು. ಅಲ್ಲದೇ ಆತ ಹಿಂದೂ ಮತ್ತು ಕ್ರಿಶ್ಚಿಯನ್ ವಿರೋಧಿಯಾಗಿದ್ದ ಮಂಗಳೂರಿನಲ್ಲಿ 50 ಸಾವಿರಕ್ಕೂ ಅಧಿಕ ಕ್ರೈಸ್ತರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿದ್ದನು ಎಂದು ಆರೋಪಿಸಿದ್ದಾರೆ.

ಹೀಗಾಗಿ ಪಠ್ಯಪುಸ್ತಕದಿಂದ ಟಿಪ್ಪು ಕುರಿತ ಪಠ್ಯವನ್ನು ಕೈಬಿಡಬೇಕು. ಮುಂದಿನ ದಿನಗಳಲ್ಲಿ ಇತಿಹಾಸ ತಜ್ಞರ ಅಭಿಪ್ರಾಯ ಸಂಗ್ರಹಿಸಿ ಸ್ವಾತಂತ್ರ್ಯ ಹೋರಾಟಗಾರರ ಪಠ್ಯ ಸೇರಿಸಬೇಕು ಎಂದು ಪತ್ರದ ಮೂಲಕ ಅಪ್ಪಚ್ಚು ರಂಜನ್ ಆಗ್ರಹಿಸಿದ್ದಾರೆ.