ಪಡುಬಿದ್ರಿ : ಎಂಡ್ ಪಾಯಿಂಟ್ ಬ್ಲೂ ಫ್ಲ್ಯಾಗ್ ಬೀಚ್ನಲ್ಲಿ ಮ್ಯಾನೇಜರ್ ಹುದ್ದೆ : ಅರ್ಜಿ ಆಹ್ವಾನ – Vishwanews24
ಪಡುಬಿದ್ರಿ : ಎಂಡ್ ಪಾಯಿಂಟ್ ಬ್ಲೂ ಫ್ಲ್ಯಾಗ್ ಬೀಚ್ನಲ್ಲಿ ಮ್ಯಾನೇಜರ್ ಹುದ್ದೆ : ಅರ್ಜಿ ಆಹ್ವಾನ
ಉಡುಪಿ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದಿರುವ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿ ಎಂಡ್ ಪಾಯಿಂಟ್ ಬ್ಲೂ ಫ್ಲ್ಯಾಗ್ ಬೀಚಿನಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪದವಿ ವಿದ್ಯಾರ್ಹತೆ ಹಾಗೂ ಕಂಪ್ಯೂಟರ್ ಬಗ್ಗೆ ಜ್ಞಾನ ಹೊಂದಿರುವ (ಟ್ಯಾಲಿ, ಪಿ.ಪಿ.ಟಿ, ಎಕ್ಸೆಲ್), ಈಗಾಗಲೇ ಬೀಚಿನಲ್ಲಿ ಅಥವಾ ಯಾವುದೇ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯಲ್ಲಿ ಕನಿಷ್ಟ 5 ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರುವವರು ಅಥವಾ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದಾಗಿದ್ದು, ಅಭ್ಯರ್ಥಿಗಳು ಕನ್ನಡ, ಇಂಗ್ಲೀಷ್ ಅಥವಾ ಹಿಂದಿ ಭಾಷೆಯಲ್ಲಿ ವ್ಯವಹರಿಸಲು ಶಕ್ತರಾಗಿರಬೇಕು.
ಅರ್ಜಿ ಸಲ್ಲಿಸಲು ಮಾರ್ಚ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ad@udupitourism.com ಅಥವಾ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಉಡುಪಿ ದೂರವಾಣಿ: 0820-2574868 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಶಿರ್ವ ಗ್ರಾಮೀಣ ಕಾಂಗ್ರೆಸ್ ನ ನೂತನ ಕಚೇರಿ ಉದ್ಘಾಟನೆ – Vishwanews24
