ಪಡುಬಿದ್ರಿ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಸ್ಟ್ಯಾಂಡ್ ಗೆ ನುಗ್ಗಿದ ಬಸ್ – ತಪ್ಪಿದ ಭಾರೀ ಅನಾಹುತ – Vishwanews24
ಪಡುಬಿದ್ರಿ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಸ್ಟ್ಯಾಂಡ್ ಗೆ ನುಗ್ಗಿದ ಬಸ್ – ತಪ್ಪಿದ ಭಾರೀ ಅನಾಹುತ
ಪಡುಬಿದ್ರಿ : ಮಂಗಳೂರಿನಿಂದ ಕಾರ್ಕಳ ಹೋಗುವ ವೇಗದೂತ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಾರ್ಕಳ ಜಂಕ್ಷನ್ ನಲ್ಲಿದ್ದ ಪೊಲೀಸ್ ಬೂತ್ ಗೆ ಡಿಕ್ಕಿ ಹೊಡೆದು ಅದನ್ನು ಸುಮಾರು ನೂರು ಅಡಿ ಎಳೆದೊಯ್ದು ರಿಕ್ಷಾ ಸ್ಟ್ಯಾಂಡ್ ಗೆ ನುಗ್ಗಿ ಒಂದು ಆಟೋ ರಿಕ್ಷಾವನ್ನು ಸಂಪೂರ್ಣ ಜಖಂಗೊಳಿಸಿದ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಅದೃಷ್ಟವಶಾತ್ ಬಸ್ ಅಲ್ಲಿಗೆ ನಿಂತಿದ್ದರಿಂದ ಹಲವರು ತಮ್ಮ ಪ್ರಾಣ ಕಳೆದುಕೊಳ್ಳವುದು ತಪ್ಪಿದೆ. ಅಲ್ಲಿ ಬ್ಯಾಂಕ್ ಎಟಿಎಂ ಅಲ್ಲದೇ ಹಲವಾರು ಅಂಗಡಿಗಳಿದ್ದು ಜನನಿಬಿಡ ಪುದೇಶವಾಗಿತ್ತು. ಹೈವೇ ಪಕ್ಕ ಅಪಘಾತ ಸಂಭವಿಸಿದ ಕಾರಣ ಸ್ವಲ್ಪ ಹೊತ್ತು ಟ್ರಾಫಿಕ್ ಜಾಮ್ ಆಗಿದೆ.
ಪಡುಬಿದ್ರಿ ಠಾಣಾಧಿಕಾರಿ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸುಗಮ ಸಂಚಾರ ಅನುವು ಮಾಡಿ ಕೊಟ್ಟಿದ್ದಾರೆ.

ಕರಾವಳಿ ಸಹಿತ ರಾಜ್ಯದಲ್ಲಿಇನ್ನೆರಡು ದಿನ ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – Vishwanews24

