ಪಡುಬಿದ್ರಿ: ಶಾಂಭವಿ ನದಿಯಲ್ಲಿ ಯುವ ಉದ್ಯಮಿ ಅಭಿಷೇಕ್ ಆಳ್ವ ಶವ ಪತ್ತೆ – vishwanews24

Featured, ದಕ್ಷಿಣ ಕನ್ನಡ

ಪಡುಬಿದ್ರಿ: ಶಾಂಭವಿ ನದಿ ಕಿನಾರೆಯಲ್ಲಿ ಯುವ ಉದ್ಯಮಿ ತಿರುವೈಲು ಗುತ್ತು ಅಭಿಷೇಕ್ ಆಳ್ವ ಮೃತದೇಹ ಪತ್ತೆ ; ಆತ್ಮಹತ್ಯೆ ಶಂಕೆ

ಪಡುಬಿದ್ರೆ: ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (29 ವ) ಮೃತದೇಹ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿ ಕಿನಾರೆಯಲ್ಲಿ ಶುಕ್ರವಾರ (ನ.07) ಮುಂಜಾನೆ ಪತ್ತೆಯಾಗಿದೆ. ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಕಂಬಳ ಪ್ರೇಮಿಯಾಗಿದ್ದ ಅಭಿಷೇಕ್ ಆಳ್ವ ತಂದೆಯ ಉದ್ಯಮವನ್ನು ನೋಡಿಕೊಳ್ಳುತ್ತಿದ್ದರು. ವಾಮಂಜೂರು ತಿರುವೈಲುಗುತ್ತು ಕಂಬಳವನ್ನು ಅತ್ಯಂತ ಶಿಸ್ತುಬದ್ಧ ಕಂಬಳ ಎಂದು ಹೆಸರು ಮಾಡುವಲ್ಲಿ ಪ್ರಮುಖ ಕಾರಣರಾಗಿದ್ದರು.

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಸಾಬೀತು : ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ – vishwanews24

 

ಬುಧವಾರ ತನ್ನ ಸ್ನೇಹಿತರೊಂದಿಗೆ ಊಟ ಮುಗಿಸಿ ತೆರಳಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು. ಗುರುವಾರ ಸಂಜೆ ಮೂಲ್ಕಿ ಬಪ್ಪನಾಡು ಸೇತುವೆ ಬಳಿ ಅವರ ಕಾರು ಪತ್ತೆಯಾಗಿತ್ತು. ಅಭಿಷೇಕ್ ನಾಪತ್ತೆ ಬಗ್ಗೆ ಪಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಶಂಕಿಸಲಾಗಿದೆ.

ಮಂಗಳೂರು: ಜನವರಿಯಲ್ಲಿ ಸರಕಾರ ಪತನ ;  ಮಧ್ಯಾಂತರ ಚುನಾವಣೆಗೆ ಬಿಜೆಪಿಯಲ್ಲಿ ಸಿದ್ಧತೆ : ಶಾಸಕ ವಿ. ಸುನಿಲ್ ಕುಮಾರ್‌ – vishwanews24

Leave a Reply