ಪಡುಬಿದ್ರಿ : ಜಿಲ್ಲಾಧಿಕಾರಿ ಆದೇಶದ ನಡುವೆಯೂ ಹೆಜಮಾಡಿ ಟೋಲ್ ನಲ್ಲಿ ಸ್ಥಳೀಯ ವಾಹನಗಳಿಂದ ಸುಂಕ ವಸೂಲಿ – vishwanews24
ಪಡುಬಿದ್ರಿ : ಹೆಜಮಾಡಿ ಟೋಲ್ ನಲ್ಲಿ ಸ್ಥಳೀಯ ವಾಹನಗಳಿಂದಲೂ ಸುಂಕ ವಸೂಲಿ
ಪಡುಬಿದ್ರಿ: ಉಡುಪಿ ಜಿಲ್ಲಾಧಿಕಾರಿಯವರು ಹೆಜಮಾಡಿ ಗ್ರಾಪಂ ವ್ಯಾಪ್ತಿಯ ವಾಹನಗಳಿಗೆ ಟೋಲ್ ವಿನಾಯಿತಿ ನೀಡುವಂತೆ ಹೆದ್ದಾರಿ ಇಲಾಖೆ ಅಧಿಕಾರಿಗಳು ಸಹಿತ ಟೋಲ್ ಅಧಿಕಾರಿಗಳಿಗೆ ಸಭೆಯಲ್ಲಿ ಆದೇಶಿಸಿದರೂ ಅವರ ಆದೇಶಕ್ಕೆ ಕಿಂಚಿತ್ತೂ ಬೆಲೆ ಇಲ್ಲದಂತಾಗಿದೆ.
ಟೋಲ್ ಅಧಿಕಾರಿಗಳು ಸ್ಥಳೀಯ ವಾಹನಗಳಿಂದಲೂ ಸುಂಕ ವಸೂಲಿ ಮಾಡುತ್ತಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೋಲ್ ವಿರುದ್ಧದ ಹೋರಾಟ ಸಮಿತಿಯ ಪ್ರಮುಖರಾದ ಸ್ಥಳೀಯ ನಿವಾಸಿ ಗುಲಾಂ ಮುಹಮ್ಮದ್ ಅವರ ಖಾತೆಯಿಂದಲೇ ಹಣ ಸುಲಿಯಲಾಗಿದೆ. ಇದು ಗಮನಕ್ಕೆ ಬಂದ ತಕ್ಷಣ ವಾಹನವನ್ನು ಟೋಲ್ ಗೇಟಲ್ಲೇ ನಿಲ್ಲಿಸಿ ಪ್ರಶ್ನಿಸಿದ್ದಾರೆ.
ಎರ್ಮಾಳು : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ , ಅಪಾಯದಿಂದ ಪಾರು – vishwanews24
ಸ್ಥಳಕ್ಕೆ ಬಂದ ಟೋಲ್ ಅಧಿಕಾರಿಗಳು ತಪ್ಪಿನ ಅರಿವಾಗಿ ಹಣವನ್ನು ಮರು ಪಾವತಿಸುವುದಾಗಿ ಹೇಳಿದ್ದಾರೆ. ಸ್ಥಳಕ್ಕೆ ಬಂದ ಪಡುಬಿದ್ರಿ ಎಸ್ಸೈ ಎಂ.ಎಸ್.ಪ್ರಸನ್ನ ಅವರು ಟೋಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಜಿಲ್ಲಾಧಿಕಾರಿ ಸಹಿತ ಜಿಲ್ಲಾ ಎಸ್ಸಿಯವರಿದ್ದ ಸಭೆಯಲ್ಲಿಯೇ ಸನೀಯ ವಾಹನಗಳಿಗೆ ಟೋಲ್ ವಿನಾಯಿತಿ ನೀಡುವಂತೆ ಆದೇಶ ಮಾಡಿದರೂ ಅವರ ಆದೇಶವನ್ನು ಮೀರಿ ಟೋಲ್ ಪಡೆದಿರುವುದು ಸರಿಯಾದ ಕ್ರಮವಲ್ಲ, ಮುಂದೆ ಇದನ್ನು ಮುಂದುವರಿಸಿದ್ದಲ್ಲಿ ಆಗುವ ಅನಾಹುತಗಳಿಗೆ ನಾವು ಜವಾಬ್ದಾರರಲ್ಲ ಎಂಬುದಾಗಿ ಟೋಲ್ ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಗುಲಾಂ ಮುಹಮ್ಮದ್, ನಮ್ಮೆಲ್ಲರ ಹೋರಾಟದ ಫಲವಾಗಿ ಸ್ಥಳೀಯ ವಾಹನಗಳಿಗೆ ಟೋಲ್ ವಿನಾಯಿತಿ ಇದ್ದರೂ, ಕಳ್ಳ ಮಾರ್ಗದಲ್ಲಿ ಟೋಲ್ ವಸೂಲಿ ನಡೆಸಿದ್ದಾರೆ. ನನ್ನ ಗಮನಕ್ಕೆ ಬಂತು ನಾನು ಪ್ರತಿಭಟಿಸಿದೆ. ಅದೇ ಗಮನಕ್ಕೆ ಬಾರದ ಅದೆಷ್ಟೋ ವಾಹನಗಳಿಂದ ವಸೂಲಿ ನಡೆಸಿದ್ದಾರೋ ಗೊತ್ತಿಲ್ಲ. ಈ ಬಗ್ಗೆ ಸ್ಥಳೀಯ ವಾಹನ ಸವಾರರು ಎಚ್ಚರಗೊಳ್ಳಬೇಕಾಗಿದೆ ಎಂದರು.
