ಪತ್ನಿಯ ಕಿರುಕುಳ ತಾಳಲಾರದೇ ಪತಿ ನೇಣಿಗೆ ಶರಣು – vishwanews24
ಪತ್ನಿಯ ಕಿರುಕುಳ ತಾಳಲಾರದೇ ನವವಿವಾಹಿತ ನೇಣಿಗೆ ಶರಣು
ಕಲಬುರಗಿ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣಿಗೆ ಶರಣಾದ ಘಟನೆ ಕಲಬುರಗಿಯ ಮಹಾದೇವ ನಗರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಆಳಂದದ ರಾಕೇಶ್ (30) ಎಂದು ಗುರುತಿಸಲಾಗಿದೆ. ಕಳೆದ 4 ತಿಂಗಳ ಹಿಂದೆ ಹಿರಿಯರ ಸಮ್ಮುಖದಲ್ಲಿ ರಾಕೇಶ್ ಮದುವೆಯಾಗಿತ್ತು. ಮದುವೆ ಬಳಿಕ ಮನೆ ಕೆಲಸ ಸೇರಿ ಇತರೆ ವಿಷಯಗಳಿಗೆ ರಾಕೇಶ್ಗೆ ಪತ್ನಿ ನಿತ್ಯ ಕಿರುಕುಳ ಕೊಡುತ್ತಿದ್ದಳು ಎಂದು ಆರೋಪಿಸಲಾಗಿದೆ.
ಮಾತು ಕೇಳದೇ ಇದ್ದರೆ ಪೊಲೀಸರಿಗೆ ದೂರು ಕೊಡುವುದಾಗಿ ಪದೇ ಪದೇ ಬೆದರಿಕೆ ಹಾಕುತ್ತಿದ್ದಳು. ಇದೇ ಕಾರಣಕ್ಕೆ ಕಿರುಕುಳ ತಾಳಲಾರದೇ ನೇಣು ಬಿಗಿದುಕೊಂಡ ರಾಕೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಮೃತನ ಪತ್ನಿ ಹಾಗೂ ಆಕೆಯ ಸಂಬಂಧಿಕರ ವಿರುದ್ಧ ರಾಕೇಶ್ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
