ಪರಿಶಿಷ್ಟರ ಅನುದಾನವನ್ನು ಪಂಚ ಗ್ಯಾರಂಟಿಗಾಗಿ ದೋಚಲು ಕಾಂಗ್ರೆಸ್ ಮುಂದಾಗಿದೆ :  ಅಶೋಕ್ ವಾಗ್ದಾಳಿ – vishwanews24

Featured, ರಾಜ್ಯ ನ್ಯೂಸ್

 ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರ :  ಅಶೋಕ್ ವಾಗ್ದಾಳಿ

ಬೆಂಗಳೂರು : ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನವನ್ನು ಪಂಚ ಗ್ಯಾರಂಟಿಗಾಗಿ ಬಳಸುವ ಮೂಲಕ ಪರಿಶಿಷ್ಟರ ಹಣವನ್ನ ದೋಚಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶಿಷ್ಟರ 11.8 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾಗಿದೆ. ಈ ಮೂಲಕ ಕಾಂಗ್ರೆಸ್‌ನವರು ಮತ್ತೊಮ್ಮೆ ಪರಿಶಿಷ್ಟ ಸಮುದಾಯಗಳಿಗೆ ದ್ರೋಹ ಬಗೆಯಲು ಹೊರಟಿದ್ದಾರೆ. ಇದು ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಕಿಡಿಕಾರಿದ್ದಾರೆ.

ನೆಲ್ಯಾಡಿ : ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮತ್ತೆ ಕುಸಿದ ಗುಡ್ಡ :ಮಂಗಳೂರು – ಬೆಂಗಳೂರು ಸಂಚಾರ ಸ್ಥಗಿತ ; ವಾಹನ ಸವಾರರ ಪರದಾಟ – vishwanews24

ಸಿದ್ದರಾಮಯ್ಯನವರೇ, ಅನುದಾನ ಹಂಚಿಕೆ ಮಾಡಲು ಹಣವಿಲ್ಲದ ಮೇಲೆ ಬಜೆಟ್‌ನಲ್ಲಿ ಸುಮ್ಮನೆ ಕಾಟಾಚಾರಕ್ಕೆ ಘೋಷಣೆ ಮಾಡುತ್ತೀರಾ? ಬಜೆಟ್‌ನಲ್ಲಿ ಅವಾಸ್ತವಿಕ ಘೋಷಣೆಗಳನ್ನು ಮಾಡಿ, ಪರಿಶಿಷ್ಟರ ಮೂಗಿಗೆ ತುಪ್ಪ ಸವರಿದ್ದೀರಿ. ಈ ಮೂಲಕ ಬಿಟ್ಟಿ ಪ್ರಚಾರ ಪಡೆದುಕೊಂಡರೆ ಪರಿಶಿಷ್ಟ ಸಮುದಾಯಗಳ ಕಲ್ಯಾಣ ಆಗುತ್ತಾ? ಇದೇನಾ ತಮಗೆ ಪರಿಶಿಷ್ಟ ಸಮುದಾಯಗಳ ಬಗ್ಗೆ ಇರುವ ಬದ್ಧತೆ? ಇದೇನಾ ತಾವು ಭಾಷಣ ಬಿಗಿಯುವ ಸಾಮಾಜಿಕ ನ್ಯಾಯ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ಕಡೆ ಬಿಡುಗಡೆ ಮಾಡಿರುವ ಅಲ್ಪ ಸ್ವಲ್ಪ ಅನುದಾನವನ್ನು ಭ್ರಷ್ಟಾಚಾರಕ್ಕೆ ಮತ್ತೊಂದು ಕಡೆ ಘೋಷಣೆ ಮಾಡಿದ ಅನುದಾನವನ್ನ ಹಂಚಿಕೆ ಮಾಡದೆ ಬಾಕಿ ಉಳಿಸಿಕೊಳ್ಳುತ್ತೀರಿ. ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು. ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಎನ್ನುವುದು ಇದ್ದರೆ ಇನ್ನೆಂದೂ ಅಹಿಂದ ಹೆಸರಿನಲ್ಲಿ ರಾಜಕೀಯ ಮಾಡಬೇಡಿ ಎಂದು ಪೋಸ್ಟ್ ಮಾಡಿದ್ದಾರೆ.

ಕಾಪು ಜೇಸಿಐ ನಿಕಟಪೂರ್ವಾಧ್ಯಕ್ಷೆ ಸುಖಲಾಕ್ಷಿ ಬಂಗೇರ ಅವರಿಗೆ ಸಾಧನಾಶ್ರೀ ಪುರಸ್ಕಾರ – vishwanews24

Leave a Reply