ಪವರ್ ಸ್ಟಾರ್ ಪುನೀತ್ ​ರಾಜ್ ಕುಮಾರ್ ನಿವಾಸಕ್ಕೆ ರಾಹುಲ್​ ಗಾಂಧಿ ಭೇಟಿ  – Vishwanews24

Featured, ರಾಜ್ಯ ನ್ಯೂಸ್

ಪವರ್ ಸ್ಟಾರ್ ಪುನೀತ್ ​ರಾಜ್ ಕುಮಾರ್ ನಿವಾಸಕ್ಕೆ ರಾಹುಲ್​ ಗಾಂಧಿ ಭೇಟಿ 

ಬೆಂಗಳೂರು: ಪವರ್ ಸ್ಟಾರ್ ಪುನೀತ್‌ ರಾಜ್‌ ಕುಮಾರ್‌ ಅವರ ನಿವಾಸಕ್ಕೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ ಕಾರ್ಯಕ್ರಮದ ಹಿನ್ನೆಲೆ ಕಾಂಗ್ರೆಸ್ ನಾಯಕ ಗುರುವಾರ ರಾಹುಲ್‌ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ, ರಾಹುಲ್ ಗಾಂಧಿ ಪುನೀತ್ ರಾಜ್‍ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಅಪ್ಪು ಫೋಟೋಗೆ ನಮನ ಸಲ್ಲಿಸಿದ್ದಾರೆ.ಈ ವೇಳೆ ಪುನೀತ್ ರಾಜ್‍ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್​ಗೆ ಧೈರ್ಯದ ಮಾತುಗಳನ್ನ ಹೇಳಿದ್ದಾರೆ. ಇದರ ಜೊತೆಗೆ ರಾಘವೇಂದ್ರ ರಾಜ್​​ಕುಮಾರ್​​ಗೂ ರಾಹುಲ್ ಗಾಂಧಿ ಸಮಾಧಾನದ ಮಾತುಗಳನ್ನ ಹೇಳಿದ್ದಾರೆ. ರಾಹುಲ್ ಗಾಂಧಿ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಎಂ.ಬಿ. ಪಾಟೀಲ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ರಾಹುಲ್​ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಪುನೀತ್​ ನಿವಾಸಕ್ಕೆ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು. 15ಕ್ಕೂ ಅಧಿಕ ಪೊಲೀಸರು ಪುನೀತ್​ ನಿವಾಸಕ್ಕೆ ಭದ್ರತೆ ನೀಡಿದ್ದರು.

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಎರ್ಮಾಳ್‌ ಸೇಕ್ರೆಡ್ ಹಾರ್ಟ್ ಚರ್ಚ್ ವತಿಯಿಂದ ಹೊರೆಕಾಣಿಕೆ – Vishwanews24

Leave a Reply