ಪಹಲ್ಗಾಮ್‌ ದಾಳಿ:  ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ – vishwanews24

Featured, ರಾಷ್ಟ್ರ ನ್ಯೂಸ್

ಪಹಲ್ಗಾಮ್‌ ದಾಳಿ:  ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಬುಧವಾರ ನಡೆದ ಭಯೋತ್ಪಾದಕರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಇದೀಗ ಘಟನೆಯಲ್ಲಿ ಭಾಗಿಯಾದ ಮೂವರು ಉಗ್ರರ  ರೇಖಾಚಿತ್ರವನ್ನು ಭದ್ರತಾ ಸಂಸ್ಥೆ ಬಿಡುಗಡೆ ಮಾಡಿದೆ.

ಭದ್ರತಾ ಸಂಸ್ಥೆಗಳು ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಈ ಭಯಾನಕ ದಾಳಿಯ ಹಿಂದಿನ ಕ್ರೂರ ಯೋಜನೆಯನ್ನು ಬಯಲು ಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿವೆ. ಇದೀಗ ಪ್ರತ್ಯಕ್ಷದರ್ಶಿಗಳ ಮಾಹಿತಿಯ ಆಧಾರದ ಮೇಲೆ ಶಂಕಿತ ಭಯೋತ್ಪಾದಕರ ರೇಖಾಚಿತ್ರವನ್ನು ಬಿಡಿಸಲಾಗಿದೆ.

ಮಣಿಪಾಲ : ಲಾಡ್ಜ್‌ನಲ್ಲಿ 50,500 ರೂ. ಮೌಲ್ಯದ ಮಾದಕ ದ್ರವ್ಯ ಹೊಂದಿದ್ದ ಮೂವರ ಬಂಧನ – vishwanews24

ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಈ ರೇಖಾಚಿತ್ರದಲ್ಲಿ ತೋರಿಸಲಾಗಿರುವ 3 ಶಂಕಿತ ಭಯೋತ್ಪಾದಕರ ಹೆಸರುಗಳು ಎಂದು ಎನ್‌ಐಎ ತಿಳಿಸಿದೆ.

ದಾಳಿಗೆ ಮುನ್ನ ದಟ್ಟವಾದ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗುತಾಣಗಳನ್ನು ನಿರ್ಮಿಸಿದ್ದರು. ಭಯೋತ್ಪಾದಕರು ಬಾಡಿ ಕ್ಯಾಮೆರಾಗಳನ್ನು ಧರಿಸಿದ್ದರು. ವಿಶೇಷವಾಗಿ ಹೆಲ್ಮೆಟ್ ಅಳವಡಿಸಿದ ಕ್ಯಾಮೆರಾಗಳನ್ನು ಧರಿಸಿ ಕೃತ್ಯವನ್ನು ಸಂಪೂರ್ಣವಾಗಿ ಚಿತ್ರೀಕರಿಸಿದ ವಿಚಾರ ತನಿಖೆಯಲ್ಲಿ ಗೊತ್ತಾಗಿದೆ.

ಕಾಶ್ಮೀರದಲ್ಲಿ ಉಗ್ರರ ದಾಳಿ: ದಕ ಜಿಲ್ಲೆಯ ಪ್ರವಾಸಿಗರು ಸಮಸ್ಯೆಯಲ್ಲಿ ಸಿಲುಕಿಕೊಂಡಿದ್ದರೆ ಕರೆ ಮಾಡಿ – vishwanews24

Leave a Reply