ಪಾಕಿಸ್ತಾನದಲ್ಲಿನ ಉಗ್ರ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ – vishwanews24
ಪಾಕಿಸ್ತಾನದಲ್ಲಿನ ಉಗ್ರ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ
ಕರಾಚಿ : ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯ ಉಗ್ರಗಾಮಿ ಸಂಘಟನೆ ಜೈಶ್ ಅಲ್ ಅದ್ಲ್ನ ಎರಡು ಅಡಗುದಾಣ ಗುರಿಯಾಗಿಸಿ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು ಈ ದಾಳಿಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿರುವುದಾಗಿ ವರದಿಯಾಗಿದೆ.
ದಕ್ಷಿಣ ಬಲೂಚಿಸ್ತಾನ್ನ ಕೌಹ್-ಸಬ್ಜ್ ಪ್ರದೇಶದ ಸುನ್ನಿ ಉಗ್ರರ 2 ಪ್ರಮುಖ ತಾಣಗಳನ್ನು ಕ್ಷಿಪಣಿಗಳು ಮತ್ತು ಡ್ರೋನ್ಗಳಿಂದ ಹೊಡೆದು ನಾಶಪಡಿಸಲಾಗಿದೆ ಎಂದು ಇರಾನ್ ಹೇಳಿಕೊಂಡಿದೆ.
ಇನ್ನೊಂದೆಡೆ ಕ್ಷಿಪಣಿ ದಾಳಿಯನ್ನು ಪಾಕಿಸ್ತಾನ ತೀವ್ರ ಖಂಡಿಸಿದ್ದು, ದಾಳಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು ಘಟನೆಯಿಂದ ಉಗ್ರ ಪರಿಣಾಮ ಎದುರಿಸಬೇಕಾಗುತ್ತದೆ ಮತ್ತು ಇದು ಸ್ವೀಕಾರಾರ್ಹವಲ್ಲ” ಎಂದು ಇರಾನ್ ಗೆ ಎಚ್ಚರಿಸಿದೆ.
PSI ಪರೀಕ್ಷೆ : ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟ – vishwanews24
ಈ ಹಿಂದೆ ಪಾಕಿಸ್ತಾನದ ಗಡಿ ಪ್ರದೇಶದಲ್ಲಿ ಇರಾನ್ ಭದ್ರತಾ ಪಡೆಗಳ ಮೇಲೆ ಉಗ್ರಗಾಮಿ ಗುಂಪು ದಾಳಿ ನಡೆಸಿತ್ತು.
