ಪಾರ್ಥಿವ ಶರೀರ ಸಾಗಿಸುತ್ತಿದ್ದ ಆಂಬ್ಯುಲೆನ್ಸ್‌ ಅಪಘಾತ – Vishwanews24

Featured, ರಾಷ್ಟ್ರ ನ್ಯೂಸ್

ಪಾರ್ಥಿವ ಶರೀರ ಸಾಗಿಸುತ್ತಿದ್ದ ಆಂಬ್ಯುಲೆನ್ಸ್‌ ಅಪಘಾತ – Vishwanews24

ಚೆನ್ನೈ: ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಯೋಧರ ಪಾರ್ಥಿವ ಶರೀರ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಯೋಧರ ಮೃತದೇಹಗಳನ್ನು ಮದ್ರಾಸ್ ರೆಜಿಮೆಂಟಲ್ ಸೆಂಟರ್ (ಎಂಆರ್‌ಸಿ) ಕುನ್ನೂರಿನ ವೆಲ್ಲಿಂಗ್‌ಟನ್‌ನಿಂದ ಸುಲೂರ್ ಏರ್ ಬೇಸ್‌ಗೆ ಕೊಂಡೊಯ್ಯಲಾಗುತ್ತಿತ್ತು. ಆದರೆ ಚಾಲಕನ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್‌ ಮಾರ್ಗಮಧ್ಯೆ ಅಪಘಾತವಾಗಿದೆ. ಈ ದುರಂತದಲ್ಲಿ ಪೊಲೀಸರ ಇಲಾಖೆಯ ಕೆಲ ಸಿಬ್ಬಂದಿಗೆ ಗಾಯವಾಗಿದೆ. ಸೂಲೂರು ವಾಯುನೆಲೆಯಿಂದ ಸುಮಾರು 45 ಕಿ.ಮೀ ದೂರದಲ್ಲಿ ಅಪಘಾತ ಸಂಭವಿಸಿದೆ.

ಸಿಡಿಎಸ್ ಬಿಪಿನ್ ರಾವತ್ ಅವರ ಪಾರ್ಥಿವ ಶರೀರವನ್ನು ಶುಕ್ರವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ದೆಹಲಿಯ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದು. ಬಳಿಕ ಕಾಮರಾಜ ಮಾರ್ಗದಿಂದ ಬೇರಾರ್ ಕ್ರಾಸ್‌ವರೆಗೆ ಅಂತ್ಯಕ್ರಿಯೆ ನಡೆಸಲಾಗುವುದು. ದೆಹಲಿ ಕಂಟೋನ್ಮೆಂಟ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಆಂಬ್ಯುಲೆನ್ಸ್ ವಿಮಾನ ನಿಲ್ದಾಣದತ್ತ ಸಾಗುತ್ತಿದ್ದಾಗ ದಾರಿಯಲ್ಲಿ ನಿಂತಿದ್ದ ಜನರು ಪುಷ್ಪವೃಷ್ಟಿ ಮಾಡುವ ಮೂಲಕ ನಾಡಿನ ವೀರಯೋಧನಿಗೆ ಅಂತಿಮ ವಿದಾಯ ಹೇಳಿದರು. ಎಲ್ಲಾ 13 ಮೃತದೇಹಗಳನ್ನು ಭಾರತೀಯ ವಾಯುಪಡೆಯ C-130J ಸೂಪರ್ ಹರ್ಕ್ಯುಲಸ್ ಸಾರಿಗೆ ವಿಮಾನದಲ್ಲಿ ಸೂಲೂರಿನಿಂದ ದೆಹಲಿಗೆ ಹಾರಿಸಲಾಯಿತು. ಆಗಲೇ ವಾಯುಪಡೆ ಮುಖ್ಯಸ್ಥರು ಅಲ್ಲಿಂದ ದೆಹಲಿಗೆ ಹೊರಟಿದ್ದಾರೆ.

ಕೃಷಿ ಕಾಯ್ದೆ ರದ್ದು: ಪ್ರತಿಭಟನೆ ಹಿಂಪಡೆದ ರೈತರು – Vishwanews24