ಪುತ್ತೂರು: 20 ವರ್ಷದ ವಿವಾಹಿತ ಮಹಿಳೆ ಆತ್ಮಹತ್ಯೆ – Vishwanews24

Featured, ದಕ್ಷಿಣ ಕನ್ನಡ

ಪುತ್ತೂರು: 20 ವರ್ಷದ ವಿವಾಹಿತ ಮಹಿಳೆ ಆತ್ಮಹತ್ಯೆ – Vishwanews24

ಪುತ್ತೂರು: ತಾಲೂಕಿನ ದಾರಂದಕುಕ್ಕು ಎಂಬಲ್ಲಿ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿ.2ರ ಗುರುವಾರ ನಡೆದಿದೆ.

ದಾರಂದಕುಕ್ಕು ನಿವಾಸಿಯಾದ ಪುತ್ತೂರಿನ ಕಾಮತ್‌ ಸ್ವೀಟ್ಸ್‌ ನಲ್ಲಿ ಉದ್ಯೋಗದಲ್ಲಿರುವ ಭಾಸ್ಕರ್ ಪ್ರಭು ಎಂಬವರ ಪತ್ನಿ ಆಶಿಕಾ(20) ಆತ್ಮಹತ್ಯೆ ಮಾಡಿಕೊಂಡವರು. ಮೃತರು ಪತಿ, 7 ತಿಂಗಳ ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಇವರಿಗೆ ಎರಡು ವರ್ಷದ ಹಿಂದೆ ವಿವಾಹವಾಗಿದ್ದು, ಆಶಿಕಾ ಚಿಕ್ಕ ವಯಸ್ಸಿನಿಂದಲೇ ಅನಾರೋಗ್ಯದಿಂದ ಬಳಲುತ್ತಿದ್ದರು. ವಿವಾಹದ ಬಳಿಕವೂ ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಜ್ಞರ ಸಭೆ ಬಳಿಕ ಹೊಸ ಮಾರ್ಗಸೂಚಿ ಬಿಡುಗಡೆ: ಸಿಎಂ ಬೊಮ್ಮಾಯಿ – Vishwanews24