ಪುತ್ತೂರು: ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು – vishwanews24
ಪುತ್ತೂರು: ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು
ಪುತ್ತೂರು: ಗುತ್ತಿಗೆದಾರರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.1ರ ಸಂಜೆ ವೇಳೆ ಪುತ್ತೂರಿನಲ್ಲಿ ನಡೆದಿದೆ.
ಪಾಣಾಜೆ ಆರ್ಲಪದವು ನಿವಾಸಿ ವಿಜಯ್ ಕುಮಾರ್ (38) ಮೃತ ದುರ್ದೈವಿ. ವಿಜಯ್ ಕುಮಾರ್ ಅವರು ಭಾನುವಾರದಂದು ಪುತ್ತೂರಿನಲ್ಲಿ ನಡೆದ ಮರಾಟಿ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ವಿಜಯ್ ಕುಮಾರ್ ಅವರ ವಿವಾಹಕ್ಕೆ ಮನೆಯವರು ಸಿದ್ಧತೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಆದರೆ ಸೋಮಾರ ಸಂಜೆ ಅವರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜ.3ರಿಂದ ರಾಜ್ಯಾದ್ಯಂತ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆಯ ಎಚ್ಚರಿಕೆ..vishwanews24
