ಪುತ್ತೂರು: ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ – Vishwanews24

Featured, ದಕ್ಷಿಣ ಕನ್ನಡ

ಪುತ್ತೂರು: ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ – Vishwanews24

ಪುತ್ತೂರು: ಆತ್ಮಹತ್ಯೆ ಮಾಡುವುದಾಗಿ ವಿಡಿಯೋ ಮಾಡಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಪುತ್ತೂರಿನಲ್ಲಿ ನಡೆದಿದೆ.

ಪುತ್ತೂರಿನ ಕಟ್ಟತ್ತಾರು ಸಮೀಪದ ನಿವಾಸಿ ಅಬ್ದುಲ್‌ ನಾಸಿರ್‌ ಆತ್ಮಹತ್ಯೆಗೆ ಯತ್ನಿಸಿದ ಯುವಕನಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತಾನು ಚಾಲಕ ವೃತ್ತಿ ಮಾಡುತ್ತಿದ್ದು, ಬೆಳ್ಳಾರೆ ಸಮೀಪ್‌ ಮಾಲಕರು ತನಗೆ ಹಲ್ಲೆ ನಡೆಸಿದ್ದಾರೆ. ಆದ್ದರಿಂದ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ವೀಡಿಯೋ ಮಾಡಿದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತತ್‌‍ಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಉಡುಪಿ: ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಕ್ಲಬ್, ಪಬ್, ಮಟ್ಕಾ ದಂಧೆ ಕಡಿವಾಣಕ್ಕೆ ಜಿಲ್ಲಾ ಬಿಜೆಪಿ ಒತ್ತಾಯ – Vishwanews24

Leave a Reply