ಪುನೀತ್ ರಾಜ್‌ಕುಮಾರ್ ಅಂತಿಮ ದರ್ಶನಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ಧತೆ – Vishwanews24

Featured, ರಾಜ್ಯ ನ್ಯೂಸ್

ಪುನೀತ್ ರಾಜ್‌ಕುಮಾರ್ ಅಂತಿಮ ದರ್ಶನಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ಧತೆ – Vishwanews24

ಬೆಂಗಳೂರು: ನಟ ಪುನೀತ್ ರಾಜ್‌ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ‌ ದರ್ಶನಕ್ಕಾಗಿ ಕಂಠೀರವ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಹೊರಾಂಗಣ ಕ್ರೀಡಾಂಗಣದಲ್ಲಿ ಪೆಂಡಾಲ್ ಹಾಕಲಾಗುತ್ತಿದ್ದು, ಪೌರ ಕಾರ್ಮಿಕರು ಸ್ವಚ್ಚತಾ ಕಾರ್ಯದಲ್ಲಿ ನಿರತರಾಗಿದ್ದ ದೃಶ್ಯ ಕಂಡುಬಂತು.

ಅಭಿಮಾನಿಗಳನ್ನು ನಿಯಂತ್ರಿಸುವ ಸಲುವಾಗಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದು, ಯಾವುದೇ ಅಹಿತಕರ ಘಟನೆ ‌ನಡೆಯಂತೆ ತಡೆಯುವ ಸಲುವಾಗಿ ಕ್ರೀಡಾಂಗಣದ ಸುತ್ತಲೂ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಸಾವಿನಲ್ಲೂ ಸಾರ್ಥಕತೆ ಮೆರೆದ ಪುನೀತ್ ​: ನೇತ್ರದಾನ ಮಾಡುವ ಮೂಲಕ ಇತರರ ಬಾಳಿಗೆ ಬೆಳಕಾದ ರಾಜಕುಮಾರ – Vishwanews24