ಪುಷ್ಪ-2 ಕಾಲ್ತುಳಿತ ಪ್ರಕರಣ : ನಟ ಅಲ್ಲು ಅರ್ಜುನ್ ಬಂಧನ – vishwanews24

Featured, ರಾಷ್ಟ್ರ ನ್ಯೂಸ್

ಪುಷ್ಪ-2 ಕಾಲ್ತುಳಿತ ಪ್ರಕರಣ : ನಟ ಅಲ್ಲು ಅರ್ಜುನ್ ಪೊಲೀಸರ ವಶಕ್ಕೆ

ಹೈದರಾಬಾದ್: ಸಂಧ್ಯಾ ಥಿಯೇಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಚೀಕಟಪಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು.

ಅವರ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು. ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ನಟ ಅಲ್ಲು ಅರ್ಜುನ್ ಹಾಗೂ ಅವರ ಬಾಡಿಗಾರ್ಡ್​ ಇನ್ನಿತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾಪು : ಲೀಲಾಧರ ಶೆಟ್ಟಿಯವರು ನಮ್ಮನ್ನು ಆಗಲಿ ವರ್ಷವಾದರೂ ಅವರು ಮಾಡಿದ ಸಮಾಜ ಸೇವೆ ನಿತ್ಯ ನಿರಂತರ : ಮನೋಹರ ಎಸ್ ಶೆಟ್ಟಿ – vishwanews24

ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚೀಕಟಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸಿಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಆದರೆ ಅಲ್ಲು ಅರ್ಜುನ್, ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್​ ಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಇನ್ನೂ ನಡೆದಿಲ್ಲ.

Leave a Reply